ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ಗುಂಡೂರಾವ್ ಸೂಚನೆ

Date:

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವರು, “ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವ ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತೀಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ. ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...