ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್, ಮಂಗಳವಾರ ದೆಹಲಿಗೆ ಸಿಎಂ ಪ್ರಯಾಣ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ.

ಆರ್​​ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ತೀವ್ರ ಮುಜುಗರಕ್ಕೀಡಾಗಿದೆ. ರಾಜ್ಯ ಸರ್ಕಾರ ತರಾತುರಿಯಲ್ಲಿ ವಿಜಯೋತ್ಸವಕ್ಕೆ ಅನುಮತಿ ನೀಡಿರುವ ಬಗ್ಗೆ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ. ಕಾಲ್ತುಳಿತ ಸುತ್ತ ಎದ್ದಿರುವ ಗೊಂದಲ, ಆರೋಪಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಮುಂದೆ ಸ್ಪಷ್ಟನೆ ಕೊಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೌಡಿಶೀಟರ್ ಸುಹಾಸ್ ಹತ್ಯೆ ತನಿಖೆಗೆ ಎನ್‌ಐಎ ಪ್ರವೇಶ: ಸಮಾಜಕ್ಕೆ ಕೊಟ್ಟ ಸಂದೇಶವೇನು?

ವಿಧಾನಸೌಧದಲ್ಲಿ ಆರ್​​ಸಿಬಿ ತಂಡದ ಸನ್ಮಾನದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾ ಕಂಡುಬಂದಿದೆ. ಭದ್ರತಾ ವ್ಯವಸ್ಥೆ ಮಾಡದೇ ಆತುರ ಆತುರವಾಗಿ ವಿಜಯೋತ್ಸವ ನಡೆಸಲು ಅನುವು ಮಾಡಿಕೊಟ್ಟ ಸರ್ಕಾರದ ನಡೆಯನ್ನು ಪ್ರತಿಕ್ಷಗಳು ತೀವ್ರವಾಗಿ ಟೀಕಿಸಿವೆ. ಇದರಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಎದುರಿಸುತ್ತಿದೆ.

ಎಂಎಲ್​​ಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ

ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನಕ್ಕೆ ಕೊನೆ ಕ್ಷಣದಲ್ಲಿ ತಡೆಬಿದ್ದಿದೆ. ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು ಹಾಗೂ ಎನ್‌ಆರ್‌ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್‌ ಕಡೆಯಿಂದ ಫೈನಲ್ ಆಗಿದೆ ಎಂದು ತಿಳಿದುಬಂದಿತ್ತು. ಆದರೆ, ಕೊನೆ ಕ್ಷಣದಲ್ಲಿ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ಕುರಿತು ಸಹ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...