ಬೊಮ್ಮಾಯಿ ವಿರುದ್ಧದ 2 ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್

Date:

ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ರೈತರು ಮತ್ತು ದೇವಾಲಯಗಳ ಆಸ್ತಿಯನ್ನು ವಕ್ಫ್‌ ಮಂಡಳಿ ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿ 2024ರ ನವೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆಗಳನ್ನು ನಡೆಸಿತ್ತು. ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಬೊಮ್ಮಾಯಿ, “ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ” ಎಂದು ಆರೋಪಿಸಿದ್ದರು. ಮಾತ್ರವಲ್ಲದೆ, ವಕ್ಫ್‌ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಅವರ ಭಾಷಣವು ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುತ್ತದೆ ಎಂದು ಆರೋಪಿಸಲಾಗಿತ್ತು. ಬೊಮ್ಮಾಯಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 196(1)(ಎ) ಅಡಿಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ಮತ್ತು ಶಿಗ್ಗಾಂವಿ ಪೊಲೀಸ್​ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ರದ್ದು ಕೋರಿ, ಬೊಮ್ಮಾಯಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ಭಾಷಣದಲ್ಲಿ ಸೆಕ್ಷನ್ 196(1)(ಎ) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು ಅಗತ್ಯವಾದ ಪ್ರಚೋದನಕಾರಿ ಅಂಶಗಳು ಇಲ್ಲ ಎಂದು ವಾದಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರು ಬೊಮ್ಮಾಯಿ ವಿರುದ್ದದ ಎರಡೂ ಪ್ರಕರಣಗಳನ್ನು ರದ್ದುಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...