‘ಗ್ಯಾರಂಟಿಗಳು ಆಮಿಷಕ್ಕೆ ಸಮ’ ಅರ್ಜಿ : ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್‌ ನೋಟಿಸ್

Date:

  • ಸೆ.1ಕ್ಕೆ‌ ವಿಚಾರಣೆಯನ್ನು ಮುಂದೂಡಿದ ನ್ಯಾ. ಎಸ್.ಸುನೀಲ್ ದತ್ ಯಾದವ್
  • ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿದ್ಧರಾಮಯ್ಯ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳು ಆಮಿಷಕ್ಕೆ ಸಮ. ಹಾಗಾಗಿ ಸಿಎಂ ಸಿದ್ದರಾಮಯ್ಯನವರ ಶಾಸಕ ಸ್ಥಾನ ಅನೂರ್ಜಿತಗೊಳಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಹೈಕೋರ್ಟ್‌ ಸಿಎಂಗೆ ನೋಟಿಸ್ ಜಾರಿ ಮಾಡಿದೆ.

ಶುಕ್ರವಾರ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿಎಂ ಸಿದ್ಧರಾಮಯ್ಯ ಅವರ ಶಾಸಕ ಸ್ಥಾನವನ್ನು ಅನೂರ್ಜಿತ ಮಾಡಬೇಕು. ಚುನಾವಣೆ ವೇಳೆ ಐದು ಗ್ಯಾರಂಟಿಗಳನ್ನು ನೀಡಿ, ಮತದಾರರಿಗೆ ಆಮಿಷ ನೀಡಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ ಪ್ರಕರಣ ಉಲ್ಲೇಖಿಸಿ ಸಿಎಂ ಕುಟುಂಬದ ಅವಹೇಳನ : ಬಿಜೆಪಿ ಕಾರ್ಯಕರ್ತೆ ವಶಕ್ಕೆ

ವರುಣಾ ಕ್ಷೇತ್ರದ ಮತದಾರ ಕೆ.ಎಂ.ಶಂಕರ ಸಲ್ಲಿಸಿದ್ದ ಅರ್ಜಿ ಶುಕ್ರವಾರ ವಿಚಾರಣೆಗೆ ಬಂದಿತ್ತು. ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿವಾದಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ. ಜೊತೆಗೆ, ಪ್ರಕರಣವನ್ನು ಸೆ.1ಕ್ಕೆ‌ ವಿಚಾರಣೆಯನ್ನು ಮುಂದೂಡಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...