ಅಂದು ನಮ್ಮನ್ನು ಹೊರದಬ್ಬಿದ್ರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ; ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

Date:

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್​ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಉಡುಪಿಯ ಹಿಜಾಬ್ ವಿವಾದದ ಸಂದರ್ಭದಲ್ಲಿ ಉಚ್ಚಾಟನೆಗೊಳಗಾಗಿದ್ದ ಎಂಟು ವಿದ್ಯಾರ್ಥಿಗಳಲ್ಲಿ ಓರ್ವಳಾದ ಆಲಿಯಾ ಅಸ್ಸಾದಿ, “ಹಿಜಾಬ್‌ಗಾಗಿ ಅಂದು ನಮ್ಮನ್ನು ಹೊರದಬ್ಬಿದ್ರಿ: ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬಿದೆ” ಎಂದು ಟಾಂಗ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ‘ಎಕ್ಸ್‌’ ಪೋಸ್ಟ್‌ನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯು, “ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನ ಇತ್ತು. ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿದಿರಿ. ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬಿದೆ” ಎಂದು ಹೇಳಿದ್ದಾರೆ.

“ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ. ನೀವು ಉಚ್ಚಾಟಿತ ವ್ಯಕ್ತಿ, ಅಭ್ಯರ್ಥಿ” ಎಂದು ಆಲಿಯಾ ಅಸ್ಸಾದಿ ಹೇಳಿಕೆ ನೀಡಿದ್ದಾರೆ‌.

ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದದಲ್ಲಿ ಸಂದರ್ಭದಲ್ಲಿ ಅಂದಿನ ಬಿಜೆಪಿ ಶಾಸಕರಾಗಿದ್ದ ರಘುಪತಿ ಭಟ್ ಮುಂಚೂಣಿಯಲ್ಲಿದ್ದರು. ಅಲ್ಲದೇ, ವಿಧಾನಸಭೆಯ ಕಲಾಪದ ಸಂದರ್ಭದಲ್ಲಿಯೂ ವಿವಾದದ ಬಗ್ಗೆ ಮಾತನಾಡಿದ್ದರು. ಈ ವಿವಾದದಿಂದಾಗಿ ಮುಂಚೂಣಿಗೆ ಬಂದಿದ್ದ ಸಂಘಪರಿವಾರದ ಮುಖಂಡ ಯಶ್ಪಾಲ್ ಸುವರ್ಣರಿಗೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಟಿಕೆಟ್ ನೀಡಿತ್ತು. ಟಿಕೆಟ್ ವಂಚಿತರಾಗಿದ್ದ ರಘುಪತಿ ಭಟ್‌ ಮಾಧ್ಯಮಗಳ ಎದುರೇ ಕಣ್ಣೀರು ಹಾಕಿದ್ದರು.

Raghupati Bhat 2

ಆ ಬಳಿಕ ರಘುಪತಿ ಭಟ್ ಅವರು ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಈ ಕ್ಷೇತ್ರದಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿತ್ತು. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದ ಬೆನ್ನಲ್ಲೇ ಇದೀಗ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...