ಅಸ್ಸಾಂ | ಧಾರ್ಮಿಕ ಸಂಕೇತಗಳನ್ನು ತೆಗೆಯುವಂತೆ ಕ್ರಿಶ್ಚಿಯನ್ ಶಾಲೆಗೆ ಆದೇಶಿಸಿದ ಹಿಂದೂ ಸಂಘಟನೆ

Date:

ಹಿಂದೂ ಸಂಘಟನೆಯೊಂದು ಅಸ್ಸಾಂನ ಕ್ರಿಶ್ಚಿಯನ್ ಶಾಲೆಗಳಲ್ಲಿರುವ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕು ಮತ್ತು ಧರ್ಮಗುರುಗಳು, ಕ್ರೈಸ್ತಸನ್ಯಾಸಿನಿಯರು ಹಾಗೂ ಸನ್ಯಾಸಿಗಳು ತಮ್ಮ ಆವರಣದಲ್ಲಿ ಧರಿಸುವ ಧಾರ್ಮಿಕ ಆಚರಣೆಗಳನ್ನು ತೊರೆಯಬೇಕು ಎಂದು ಆದೇಶಿಸಿ 15 ದಿನಗಳ ಅಂತಿಮ ಗಡುವು ನೀಡಿದೆ.

ಶಾಲೆಯ ಆವರಣದಿಂದ ಜೀಸಸ್‌ ಮತ್ತು ಮೇರಿಯ ಪ್ರತಿಮೆಗಳನ್ನು ತೆಗೆಯಲು ಕುಟುಂಬ ಸುರಕ್ಷ್ಯ ಪರಿಷದ್ ನೀಡಿರುವ ಆದೇಶದಲ್ಲಿ ಸೂಚಿಸಲಾಗಿದೆ. ಕ್ರೈಸ್ತ ಮಿಷನರಿಗಳು ಶಿಕ್ಷಣ ಸಂಸ್ಥೆಗಳು ಮತ್ತು ಶಾಲೆಗಳನ್ನು ಮತಾಂತರ ಚಟುವಟಿಕೆಗಳಿಗೆ ಬಳಸುವುದನ್ನು ತಡೆಯುವ ಉದ್ದೇಶದಿಂದ ಈ ಸೂಚನೆ ನೀಡಲಾಗಿದೆ ಎಂದು ಪರಿಷದ್ ಹೇಳಿದೆ.

ಜೊತೆಗೆ, ಶಾಲಾ ಆವರಣಗಳಲ್ಲಿರುವ ಚರ್ಚ್‌ಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದೇಶ ಜಾರಿಗೆ ತರದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಸಿದೆ. ಶಾಲೆಯ ಕ್ರೈಸ್ತ ಧರ್ಮಗುರು ಜಾನ್ ಮೂಲಾಚಿರ ಇಂತಹ ಆದೇಶದ ಆಚರಣೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

“ಸಂಘಟನೆಗಳ ಬೆದರಿಕೆಯ ಅರಿವಿದೆ. ಆದರೆ ಇಂತಹ ಬೆಳವಣಿಗೆಗಳು ರಾಜ್ಯದಲ್ಲಿ ಏಕಾಗುತ್ತಿವೆ ಎಂದು ತಿಳಿಯುತ್ತಿಲ್ಲ” ಎಂದು ಮಾಧ್ಯಮಗಳಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆದರಿಕೆಯ ಹಿನ್ನೆಲೆಯಲ್ಲಿ ಧರ್ಮಗುರುಗಳು, ಸನ್ಯಾಸಿನಿಯರು ಶಾಲಾ ಆವರಣದಲ್ಲಿ ಸಾಮಾನ್ಯ ಉಡುಗೆಗಳನ್ನು ಧರಿಸುವಂತೆ ಕ್ರೈಸ್ತ ಮುಖಂಡರು ಸಲಹೆ ನೀಡಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರ್ಮಾರಿಗೆ ಮನವಿ ಸಲ್ಲಿಸಲು ಕ್ರೈಸ್ತ ಮುಖಂಡರು ನಿರ್ಧರಿಸಿದ್ದಾರೆ.

ಹಿಂದೂ ಸಂಘಟನೆಗಳು ಧಾರ್ಮಿಕ ರಾಷ್ಟ್ರವಾದಕ್ಕೆ ಒತ್ತು ನೀಡಿ ಪ್ರಚಾರ ಆರಂಭಿಸಿದ ನಂತರ ಸಂಪೂರ್ಣ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಧರ್ಮ ಮತ್ತು ಮಿಷನರಿ ಚಟುವಟಿಕೆಗಳಿಗೆ ಧಕ್ಕೆಯಾಗಿದೆ ಎಂದು ಮುಖಂಡರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...