ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಮತ್ತೆ ಹಠ ಹಿಡಿಯಲಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Date:

ಸಿಎಂ ಸಿದ್ದರಾಮಯ್ಯನವರು ‘ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್ ತಗೋತೇವೆ’ ಎಂದು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಲಪಂಥೀಯ ಮುಖಂಡ ಹಾಗೂ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ, “ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಓಡಾಡಿದರೆ, ಹಿಂದೂ ವಿದ್ಯಾರ್ಥಿಗಳು ಕೂಡ ತಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಹಠ ಹಿಡಿಯುತ್ತಾರೆ. ಇದು ಈ ಹಿಂದೆಯೂ ಆಗಿತ್ತು. ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರ ಇಂತಹ ವೈರುಧ್ಯಕ್ಕೆ ಕಾರಣವಾಗಲಿದೆ” ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುತ್ತೇವೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯನವರು ಕಿಡಿಯನ್ನು ಹಚ್ಚಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರವು ಹೇಗಾದರೂ ಮಾಡಿ ಹಿಜಾಬ್ ಅನ್ನು ತಡೆಯುವ ನಿಟ್ಟಿನಲ್ಲಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಕೂಡ ಎತ್ತಿ ಹಿಡಿದಾಗ, ಇಡೀ ರಾಜ್ಯ ಮಾತ್ರವಲ್ಲದೇ ದೇಶ ಕೂಡ ಸಂಭ್ರಮಿಸಿತ್ತು. ಈ ಜಗಳವನ್ನು ಬಿಜೆಪಿಯವರೋ ಅಥವಾ ವಿಪಕ್ಷ ನಾಯಕ ಅಶೋಕ್ ಅವರೋ ಹುಟ್ಟು ಹಾಕಬೇಕೆಂದು ಇಲ್ಲ. ಕಾಲೇಜಿನ ಮಕ್ಕಳ ನಡುವೆ ಈ ಬಗ್ಗೆ ಸಹಜವಾಗಿ ಜಗಳ ಹುಟ್ಟು ಹಾಕಲಿದೆ” ಎಂದು ತಿಳಿಸಿದ್ದಾರೆ.

ಸಿಎಂ ನೀಡಿರುವ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಹೇಳಿಕೆ ಖಂಡಿಸಿದ ಚಕ್ರವರ್ತಿ ಸೂಲಿಬೆಲೆ, “ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ರಾಜ್ಯವನ್ನು 25 ವರ್ಷಗಳಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಿತ್ತು. ಸಿದ್ದರಾಮಯ್ಯ ಸರ್ಕಾರ ನಾಡನ್ನು 50 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗಿದೆ. ಮುಸ್ಲಿಂ ಸಮುದಾಯ ಕಲ್ಯಾಣಕ್ಕೆ ರೂ. 10,000 ಕೋಟಿ ಕೊಡೋದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಅಷ್ಟು ದೊಡ್ಡ ಮೊತ್ತವನ್ನು ಹೇಗೆ ಹೊಂದಿಸಲಿದ್ದಾರೆ ಅನ್ನೋದು ಜನರಿಗೆ ಅರ್ಥವಾಗುತ್ತಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಅನುದಾನ ಅಥವಾ ಶಾಲಾ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನ ನಿಲ್ಲಿಸಿ ಅವರು ಹಣ ನೀಡುತ್ತಾರೆಯೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅತಾರ್ಕಿಕ ನಿರ್ಣಯಗಳನ್ನು ತೆಗೆದುಕೊಳ್ಳುವ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳ ಅವಧಿಯಲ್ಲಿ ಜನರಿಂದ ತಿರಸ್ಕಾರಕ್ಕೊಳಗಾಗಿರುವ ದೇಶದ ಮೊದಲ ಸರ್ಕಾರ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು” ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...