ಶಿವಾಜಿ ಪ್ರತಿಮೆ ಕುಸಿತ: ‘ಇಂಡಿಯಾ’ ಕೂಟದಿಂದ ‘ಚಪ್ಪಲಿಯಲ್ಲಿ ಹೊಡೆಯಿರಿ’ ಪ್ರತಿಭಟನೆ

Date:

ಮಹಾರಾಷ್ಟ್ರದ ಸಿಂಧುದುರ್ಗ ಬಳಿಯ ಮಾಲ್ವಾನ್‌ನಲ್ಲಿ ಛತ್ರಪತಿ ಶಿವಾಜಿಯ 35 ಅಡಿಯ ಪ್ರತಿಮೆ ಕುಸಿದುಬಿದ್ದಿದ್ದು, ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ವಿರುದ್ಧ ‘ಇಂಡಿಯಾ’ ಒಕ್ಕೂಟದ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮುಂಬೈನ ಹುತಾತ್ಮ ಚೌಕ್‌ನಿಂದ ಗೇಟ್‌ವೇ ಆಫ್‌ ಇಂಡಿಯಾದವರೆಗೆ ಚಪ್ಪಲಿ ಹಿಡಿದು ‘ಜೋಡೆ ಮಾರೋ’ (ಚಪ್ಪಲಿಯಲ್ಲಿ ಹೊಡೆಯಿರಿ) ಘೋಷಣೆಯೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಕಳೆದ 8 ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದೆ. ಕಳೆಪೆ ಕಾಮಗಾರಿ ಮತ್ತು ಭ್ರಷ್ಟಾಚಾರವೇ ಪ್ರತಿಮೆ ಕುಸಿದು ಬೀಳಲು ಕಾರಣವೆಂದು ‘ಇಂಡಿಯಾ’ ಒಕ್ಕೂಟ ಆರೋಪಿಸಿದೆ.

ಪ್ರತಿಭಟನೆಯ ಕಾರಣದಿಂದಾಗಿ ಸರ್ಕಾರವು ಗೇಟ್‌ವೇ ಆಫ್‌ ಇಂಡಿಯಾದಲ್ಲಿ ಭಾರೀ ಭದ್ರತಾ ಪಡೆಗಳನ್ನು ನಿಯೋಜಿಸಿದೆ. “ಮಹಾರಾಷ್ಟ್ರದ ಹೆಮ್ಮೆ ಶಿವಾಜಿ ಪ್ರತಿಮೆ ಕುಸಿದುಬಿದ್ದಿದೆ. ಭ್ರಷ್ಟ ಶಿವದ್ರೋಹಿಗಳಿಗೆ ಕ್ಷಮೆ ಇಲ್ಲ. ಕಳಪೆ ಕಾಮಗಾರಿ, ಭ್ರಷ್ಟಾಚಾರದಿಂದ ಶಿವಾಜಿಯನ್ನು ಮಹಾಯುತಿ [ಬಿಜೆಪಿ – ಎನ್‌ಸಿಪಿ (ಅಜಿತ್ ಬಣ) – ಶಿವಸೇನೆ (ಶಿಂಧೆ ಬಣ)] ಅವಮಾನಿಸಿದೆ. ಶಿವದ್ರೋಹಿಗಳಿಗೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದು ಪ್ರತಿಭಟನಾನಿರತ ಮಹಾವಿಕಾಸ್ ಅಗಾಡಿ [ಕಾಂಗ್ರೆಸ್‌ – ಶಿವಸೇನೆ (ಉದ್ದವ್ ಬಣ) – ಎಸ್‌ಸಿಪಿ (ಪವಾರ್ ಬಣ)] ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಮೆ ಕುಸಿದು ಬಿದ್ದ ಪ್ರಕರಣದಲ್ಲಿ ಪ್ರತಿಮೆ ನಿರ್ಮಾಣ ಯೋಜನೆಯ ರಚನಾತ್ಮಕ ಸಲಹೆಗಾರ ಮತ್ತು ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಯತ್ನ, ನರಹತ್ಯೆ ಹಾಗೂ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಆರೋಪಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ರಾಜಕೀಯ ಹಗ್ಗಜಗ್ಗಾಟ, ಹಿನ್ನಡೆಯ ನಡುವೆ ಪ್ರತಿಮೆ ಕುಸಿತದ ಕಾರಣಕ್ಕೆ ಪ್ರಧಾನಿ ಮೋದಿ ಜನರಲ್ಲಿ ಕ್ಷಮೆಯಾಚಿಸಿದ್ದಾರೆ. “ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಹೆಸರು ಅಥವಾ ರಾಜನಲ್ಲ. ನಮಗೆ ಅವರು ಆರಾಧ್ಯದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...