ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ HMT ಹಾಲಿ, ನಿವೃತ್ತ ಉದ್ಯೋಗಿಗಳು

Date:

ಹಿಂದೂಸ್ತಾನ್ ಮಷೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಹಾಗೂ ನಿವೃತ್ತ ಉದ್ಯೋಗಿಗಳು ಸೋಮವಾರ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.

ಬೆಂಗಳೂರಿನ ಹೆಚ್‌ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಉದ್ಯೋಗಿಗಳು; ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.

“ನಿವೃತ್ತಿ ನಂತರ ಕಂಪನಿಯಿಂದ ಬರಬೇಕಾದ ನಮ್ಮ ಸೌಲಭ್ಯಗಳು ಬಾರದೆ ಇರುವುದರಿಂದ ನಮಗೆ ಕಾಯಿಲೆ ಬಂದಾಗ ಔಷಧ ಖರೀದಿ ಮಾಡುವುದು ಕೂಡ ಕಷ್ಟವಾಗಿದೆ. ಸುಮಾರು ಐದಾರು ವರ್ಷಗಳಿಂದ ನಮಗೆ ಬರಬೇಕಿರುವ 30ರಿಂದ 40 ಲಕ್ಷ ರೂಪಾಯಿ ಹಣ ಕಂಪನಿಯಲ್ಲಿಯೇ ಉಳಿದಿದೆ. ಈ ಹಣವನ್ನು ತಾವು ಕೊಡಿಸಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಕಾರಣಕ್ಕೂ ದೇಶದ ಪ್ರತಿಷ್ಠೆಯ ಕಂಪನಿಯಾಗಿದ್ದ ಹೆಚ್‌ಎಂಟಿಯನ್ನು ಮುಚ್ಚಬಾರದು. ಒಂದು ವೇಳೆ ಅಂತಹ ಸಂದರ್ಭ ಬಂದರೆ ಬಿಹೆಚ್ ಇಎಲ್, ಬಿಇಎಲ್, ಬಿಇಎಂಎಲ್ ದಂತಹ ಕಂಪನಿಗಳಲ್ಲಿ ಹೆಚ್‌ಎಂಟಿಯನ್ನು ವಿಲೀನ ಮಾಡಬೇಕು ಅಥವಾ ನೌಕರಿಗಾದರೂ ಆ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿಕೊಂಡರು.

ಉದ್ಯೋಗಿಗಳ ಮನವಿ ಆಲಿಸಿದ ನಂತರ ಮಾತನಾಡಿದ ಸಚಿವ ಕುಮಾರಸ್ವಾಮಿ, “ಈ ವಿಷಯ ನನ್ನ ಗಮನಕ್ಕೆ ಈಗಾಗಲೇ ಬಂದಿದೆ. ಉದ್ಯೋಗಿಗಳಿಗೆ ಬಾಕಿ ಇರುವ ₹361 ಕೋಟಿ ಮೊತ್ತ ಪಾವತಿಸುವ ಬಗ್ಗೆ ಮಾರ್ಗೋಪಾಯ ಹುಡುಕಲಾಗುವುದು. ಈ ಬಗ್ಗೆ ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಖಂಡಿತಾ ಚರ್ಚೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಹೆಚ್‌ಎಂಟಿ ಕಾರ್ಖಾನೆಯನ್ನು ಪುನಶ್ಚೇತನ ಮಾಡುವುದು ಒಂದು ಭಾಗವಾದರೆ, ನಿವೃತ್ತ ಹಾಗೂ ಹಾಲಿ ಕಾರ್ಮಿಕರ ಬಾಕಿ ಪಾವತಿ ಮಾಡುವುದು ಮತ್ತೊಂದು ಸವಾಲಾಗಿದೆ. ಈ ಬಗ್ಗೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳಿಗೆ ಕಾಯಕಲ್ಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ” ಎಂದರು.

“ಪ್ರಧಾನಿಗಳ ನೇತೃತ್ವದಲ್ಲಿ ಸಂಕಷ್ಟದಲ್ಲಿರುವ ವಿವಿಧ ಕೈಗಾರಿಕೆಗಳಿಗೆ ಮರುಜೀವ ಕೊಡುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ವೈಜಾಗ್ ಸ್ಟೀಲ್, ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಾರ್ಖಾನೆ, ಸೇಲಂ ಸ್ಟೀಲ್ ಇತ್ಯಾದಿ ಸೇರಿವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...