‘ಹೊಲೆಗೇರಿ’ ಹೇಳಿಕೆ | ನಟ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್, ವಿಚಾರಣೆಗೆ ಹಾಜರಾಗಲು ನೋಟಿಸ್

Date:

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗಿದೆ. ಈ ವಿವಾದಾತ್ಮಕ ಹೇಳಿಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ತಕ್ಷಣ ಉಪೇಂದ್ರ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ 12ರ ಸುಮಾರಿಗೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

IMG 20230814 WA0096

ಈ ಹಿನ್ನೆಲೆಯಲ್ಲಿ ಉಪೇಂದ್ರ ಅವರ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗಿದೆ. ಈ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಎಫ್ಐಆರ್ ನಲ್ಲಿ ದೂರುದಾರ ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿ, ಮನವಿ ಮಾಡಿದ್ದರು.

IMG 20230814 WA0095

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...