ಗೃಹ ಸಚಿವರೇ, ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ: ಆರ್‌ ಅಶೋಕ್‌ ವಾಗ್ದಾಳಿ

Date:

ಕೋಮುಗಲಭೆಗಳನ್ನು ತಡೆಯಲಾಗದ ನಾಲಾಯಕ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಲಕ್ಷಣ. ಇಂತಹ ಒಂದಲ್ಲ ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ತಿರುಗೇಟು ನೀಡಿದ್ದಾರೆ.

“ನಮ್ಮ ದೇಶ, ಧರ್ಮದ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ಹಬ್ಬ, ಉತ್ಸವಗಳ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ, ರಾಮಜನ್ಮಭೂಮಿ ಹೋರಾಟದ ಸಂದರ್ಭದಲ್ಲಿ ದೇಶಕ್ಕಾಗಿ ಧರ್ಮಕ್ಕಾಗಿ ಜೈಲು ವಾಸ ಅನುಭವಿಸಿದವನು ನಾನು” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

“ಕೈಲಾಗದವನು ಮೈಪರಚಿಕೊಂಡ” ಎಂಬಂತೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಅವರ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ ಪರಮೇಶ್ವರ್‌ ಅವರು ವಿಪಕ್ಷ ನಾಯಕರ ಮೇಲೆ ಎಫ್‌ಐಆರ್‌ ಹಾಕಿರುವುದು ಹೇಡಿತನದ ಪರಮಾವಧಿ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸಮರ್ಥ ಗೃಹ ಸಚಿವ ಪರಮೇಶ್ವರ್‌ ಅವರೇ, ಕಳೆದ ಬುಧವಾರ ರಾತ್ರಿ ಬೆಂಗಳೂರಿನಿಂದ ಕೇವಲ 130 ಕಿಮೀ ದೂರದಲ್ಲಿರುವ ನಾಗಮಂಗಲದಲ್ಲಿ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ನಡೆದು ಒಂದು ವಾರ ಕಳೆದಿದ್ದರೂ ಈವರೆಗೂ ತಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕೆಲಸ ಮಾಡಿಲ್ಲ. ಘಟನಾ ಸ್ಥಳಕ್ಕೆ ಹೋಗಿ ಅಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡು, ಭಯಭೀತರಾಗಿರುವ ಸ್ಥಳೀಯರ ಅಳಲು, ದುಮ್ಮಾನ, ಆತಂಕ, ಆಕ್ರೋಶ ಕೇಳಿದ್ದಿದ್ದರೆ ತಮಗೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗುತ್ತಿತ್ತು. ಆದರೆ ತಮಗೆ ಕರ್ತವ್ಯ ಪ್ರಜ್ಞೆಯೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಮಸಲತ್ತು-ಕೇಜ್ರೀವಾಲ್ ಸವಾಲು

“ನನ್ನ ಮೇಲೆ ಎಫ್ಐಆರ್ ಹಾಕಿ ಏನು ಸಾಧಿಸಲು ಹೊರಟಿದ್ದೀರಿ? ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಪತ್ರಕರ್ತರು ವ್ಯಕ್ತಪಡಿಸಿರುವ ಅನುಮಾನವನ್ನ ನನ್ನ ಎಕ್ಸ್‌ ಖಾತೆ ಪೋಸ್ಟ್ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆಯೇ ಹೊರತು, ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ” ಎಂದಿದ್ದಾರೆ.

“ಇಷ್ಟಕ್ಕೂ ಎಫ್ಐಆರ್ ಹಾಕಿರುವ ಪೊಲೀಸರು ನನ್ನ ಪೋಸ್ಟ್ ನಲ್ಲಿರುವ ಮಾಹಿತಿಯನ್ನ ಪೂರ್ತಿಯಾಗಿ ಓದಿದ್ದಾರೋ ಇಲ್ಲವೋ ಅಥವಾ ಅವರಿಗೆ ಕನ್ನಡ ಸರಿಯಾಗಿ ಬರುತ್ತೋ ಇಲ್ಲವೋ ಅರ್ಥವಾಗುತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನಾನು ಹಂಚಿಕೊಂಡಿರುವ ದೃಶ್ಯಾವಳಿಗಳು ಚಿಕ್ಕಮಗಳೂರಿನಲ್ಲಿ ಮತಾಂಧರು ಪ್ಯಾಲೆಸ್ಟೈನ್ ಧ್ವಜ ಹಿಡಿದು ಮಾಡಿದ ಪುಂಡಾಟಿಕೆ, ದಾವಣಗೆರೆಯಲ್ಲಿ ಕೇಸರಿ ಧ್ವಜ ಹಾರಿಸಿದ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ಮಾಡಿರುವ ಘಟನೆಗಳದ್ದು. ನನ್ನ ಪೋಸ್ಟ್ ನಲ್ಲಿ ನಾನು ಉಲ್ಲೇಖ ಮಾಡಿರುವುದೂ ಅದನ್ನೇ” ಎಂದಿದ್ದಾರೆ.

“ರಾಜ್ಯದ ಅನೇಕ ಕಡೆಗಳಲ್ಲಿ ಗಣೇಶೋತ್ಸವವನ್ನೇ ಗುರಿಯಾಗಿಟ್ಟುಕೊಂಡು ನಡೆದಿರುವ ಇಂತಹ ಪ್ರಚೋದನಕಾರಿ ಘಟನೆಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ಕೈವಾಡ ಇರಬಹುದು ಎಂದು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ನಾನು ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ” ಎಂದು ಹೇಳಿದ್ದಾರೆ.

“ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿರುವ ದೃಶ್ಯಗಳು, ಕಲ್ಲು ಎಸೆದಿರುವ ದೃಶ್ಯಗಳು, ವಾಹನ, ಅಂಗಡಿಗಳನ್ನ ಧ್ವಂಸ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ ಇದೊಂದು ‘ಸಣ್ಣ’ ಘಟನೆ, ‘ಆಕಸ್ಮಿಕ’ ಘಟನೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಅಸಲಿಗೆ ಗೃಹ ಸಚಿವ ಪರಮೇಶ್ವರ್ ಅವರ ಮೇಲೆ ಮೊದಲು ಎಫ್‌ಐಆರ್‌ ದಾಖಲಿಸಬೇಕು. ಸಚಿವರಿಗೆ ತಪ್ಪು ಮಾಹಿತಿ ನೀಡಿದ ಪೊಲೀಸರ ಮೇಲೆ ಎಫ್ಐಆರ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...