ಪಿಎಸ್‌ಐ ಪರೀಕ್ಷೆ ದಿನಾಂಕ | ಯಡವಟ್ಟು ಹೇಳಿಕೆ ನೀಡಿ, ತುರ್ತು ಸಭೆ ನಡೆಸುತ್ತಿರುವ‌ ಗೃಹ ಸಚಿವ ಪರಮೇಶ್ವರ್!

Date:

ಪಿಎಸ್‌ಐ ಮತ್ತು ಯುಪಿಎಸ್‌ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದು, ಈ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಪ್ಪು ಮಾಹಿತಿ ನೀಡುವ ಮೂಲಕ ಅಭ್ಯರ್ಥಿಗಳಿಗೆ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಎಂದಿನಂತೆ ಸುದ್ದಿಗಾರರು ಬಂದು ಇಂದು (ಸೆ.12) ಮೈಕ್‌ ಹಿಡಿದಾಗ ಹಿಂದೆ ಮುಂದೆ ಯೋಚಿಸದೇ “ಪಿಎಸ್‌ಐ ಮತ್ತು ಯುಪಿಎಸ್‌ಸಿ ಪರೀಕ್ಷೆ ಒಂದೇ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನವಿ ಮೇರೆಗೆ ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರ ಮುಂದೂಡಲಾಗಿದೆ” ಎಂದು ಹೇಳಿಕೆ ನೀಡಿಬಿಟ್ಟರು.

ಮುಂದುವರಿದು,“ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರ ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಪರಮೇಶ್ವರ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮಗಳಲ್ಲಿ ಸಚಿವ ಪರಮೇಶ್ವರ್‌ ಹೇಳಿಕೆ ಪ್ರಕಟವಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತೆ ಗೊಂದಲಕ್ಕೆ ಈಡಾಗಿದ್ದಾರೆ. ಪಿಎಸ್‌ಐ ಆಕಾಂಕ್ಷಿ ರವಿಶಂಕರ್‌ ಮಾಲಿಪಾಟೀಲ್‌ ಅವರು ಸಚಿವ ಪರಮೇಶ್ವರ್‌ ಹೇಳಿಕೆ ಗಮನಿಸಿ ಕೂಡಲೇ ಅವರು ಈ ದಿನ.ಕಾಮ್‌ ಕರೆ ಮಾಡಿ, “ಸಚಿವ ಪರಮೇಶ್ವರ್ ಅವರಿಗೆ ಯುಪಿಎಸ್‌ಸಿ ಪರೀಕ್ಷೆ ವೇಳಾಪಟ್ಟಿಯೇ ಗೊತ್ತಿಲ್ಲ ಅನ್ನಿಸುತ್ತದೆ. ಸ್ವತಃ ಪರಮೇಶ್ವರ್‌ ಘೋಷಿಸಿದ ದಿನಾಂಕದಂದೇ ಯುಪಿಎಸ್‌ಸಿ ಎರಡು ಭಾಷಾ ಪತ್ರಿಗಳಿಗೆ ಪರೀಕ್ಷೆ ನಡೆಯುತ್ತಿದೆ” ಎಂದು ಗಮನಕ್ಕೆ ತಂದರು.

“ರಾಜ್ಯದಲ್ಲಿ 60ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ತೇರ್ಗಡೆಹೊಂದಿ ಮುಖ್ಯಪರೀಕ್ಷೆ ಬರೆಯುತ್ತಿದ್ದಾರೆ. ಜೊತೆಗೆ ಆ 60 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಕೂಡ ಕಟ್ಟಿದ್ದಾರೆ. ಶನಿವಾರದ ಯುಪಿಎಸ್‌ಸಿ ಪರೀಕ್ಷೆ ಬಹಳ ಮುಖ್ಯವಾದುದು. ಭಾಷಾ ಪರೀಕ್ಷೆಗೆ ಹಾಜರಾಗದಿದ್ದರೆ ಇಡೀ ಯುಪಿಎಸ್‌ಸಿ ಪರೀಕ್ಷೆಯಲ್ಲಿ ನಾವು ಎಷ್ಟೇ ಅಂಕಗಳಿಸಿದರೂ ಉಪಯೋಗವಿಲ್ಲ” ಎಂದು ವಿವರಿಸಿದರು.

WhatsApp Image 2024 09 12 at 5.25.41 PM

ಗೃಹ ಸಚಿವ ಹೇಳಿಕೆ ಪಡೆಯಲು ಈ ದಿನ.ಕಾಮ್‌ ಸಚಿವರನ್ನು ಸಂಪರ್ಕಿಸಿದಾಗ ಅವರ ಆಪ್ತರು ಮಾತನಾಡಿ, “ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಸಚಿವ ಮಧು ಬಂಗಾರಪ್ಪ ಅವರ ಜೊತೆ ಸಚಿವರು ಚರ್ಚಿಸಿ ಅಧಿಕೃತ ಸ್ಪಷ್ಟನೆ ನೀಡಲಿದ್ದಾರೆ. ಬೆಳಿಗ್ಗೆ ಸಚಿವರು ಹೇಳಿದ ದಿನಾಂಕದ ಬಗ್ಗೆಯೂ ಅಧಿಕಾರಿಗಳು ಸಚಿವರ ಗಮನಕ್ಕೆ ತಂದು ಚರ್ಚಿಸಿದ್ದಾರೆ. ಕೆಇಎ ಅಧಿಕಾರಿಗಳು ತಪ್ಪು ಮಾಹಿತಿ ಒದಗಿಸಿದ್ದರಿಂದ ಸಚಿವರು ಪರೀಕ್ಷಾ ದಿನಾಂಕವನ್ನು ಘೋಷಿಸಿದರು. ಈ ಬಗ್ಗೆ ತುರ್ತು ಸಭೆ ನಡೆಯುತ್ತಿದೆ. ದಿನಾಂಕ ಮತ್ತೆ ಮುಂದಕ್ಕೆ ಹೋಗಬಹುದು” ಎಂದು ತಿಳಿಸಿದರು.

“ಯುಪಿಎಸ್‌ಸಿ ಮತ್ತು 402 ಪಿಎಸ್‌ಐ ಎರಡು ಪರೀಕ್ಷೆಗಳನ್ನು ಬರೆಯುತ್ತಿರುವ ಅಭ್ಯರ್ಥಿಗಳು ಯಾರೂ ಗಾಬರಿ ಆಗಬೇಡಿ. ಗೃಹಮಂತ್ರಿಗಳಿಗೆ ಕೆಇಎ ಅಧಿಕಾರಿಗಳ ತಪ್ಪು ಮಾಹಿತಿಯನ್ನು ಒದಗಿಸಿದರ ಪರಿಣಾಮ ಗೃಹಮಂತ್ರಿಗಳು ಬೆಳಿಗ್ಗೆ ಮಾಧ್ಯಮಗಳ ಮುಂದೆ ತಪ್ಪಾದ ದಿನಾಂಕವನ್ನು ಹೇಳಿದ್ದಾರೆ. ನಾವು ಗೃಹಮಂತ್ರಿಗಳಿಗೆ ಮನವರಿಕೆ ಮಾಡಿ, ಸದ್ಯದಲ್ಲೇ ಬೇರೆ ದಿನಾಂಕವನ್ನು ನಿಗದಿಪಡಿಸಲು ಮನವಿ ಮಾಡಿದ್ದೇವೆ. ಅದಕ್ಕೆ ಒಪ್ಪಿದ ಗೃಹಮಂತ್ರಿಗಳು ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ 402 ಪರೀಕ್ಷಾ 28ನೇ ತಾರೀಕಿನ ಬದಲು ಬೇರೆ ದಿನಾಂಕವನ್ನು ಸದ್ಯದಲ್ಲೇ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದಾರೆ” ಎಂಬ ಮಾಹಿತಿಯೊಂದು ಪಿಎಸ್‌ಐ ಆಕಾಂಕ್ಷಿಗಳ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

WhatsApp Image 2024 09 12 at 5.34.09 PM
WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...