ಹನಿಟ್ರ್ಯಾಪ್‌‌ | ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ

Date:

ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌, “ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ ಎಂದಿದ್ದರು. ಆ ಪ್ರಕಾರ ಈ ದಿನ ಮನವಿ ನೀಡಿದ್ದಾರೆ” ಎಂದರು.

“ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ. ಸಚಿವ ರಾಜಣ್ಣ ಅವರು ನೀಡಿರುವ ಮನವಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದಲ್ಲಿ ಚರ್ಚೆಯಾಗಿರುವ ಹನಿಟ್ರ್ಯಾಪ್ ಯತ್ನ ವಿಷಯಕ್ಕೆ ಸಂಬಂಧಿಸಿದಂರೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ನ ತೀರ್ಪಿಗಾಗಿ ಕಾಯುವುದಿಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ. ಹನಿಟ್ರ್ಯಾಪ್ ಯತ್ನ ವಿಷಯ ಸದನದಲ್ಲಿ ಚರ್ಚೆಯಾಗಿರುವುದರಿಂದ ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಲು ಬರುವುದಿಲ್ಲ. ಸ್ಪೀಕರ್ ಅವರು ಸುಮೋ ಮೋಟೋ ದಾಖಲಿಸುವಂತೆ ಸೂಚಿಸಬಹುದಿತ್ತು. ಅವರು ಹೇಳಿದ್ದರೆ ಬೇರೆ ವಿಷಯವಾಗುತ್ತಿತ್ತು. ಆ ರೀತಿ ಆಗಿಲ್ಲ. ವಿಷಯ ಸದನದಲ್ಲಿ ಪ್ರಸ್ತಾಪವಾಗುವ ಮೊದಲು ಸಚಿವ ರಾಜಣ್ಣ ಅವರಾಗಲಿ ಮತ್ತು ಅವರ ಪುತ್ರ ಆರ್.ರಾಜೇಂದ್ರ ಅವರಾಗಲಿ ನನ್ನ ಬಳಿ ಚರ್ಚಿಸಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...