ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌, ನ್ಯಾಯಾಂಗ ಇಲವೇ ಸಿಬಿಐ ತನಿಖೆ ನಡೆಯಲಿ: ಆರ್‌ ಅಶೋಕ್

Date:

ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ. ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿ. ಈ ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ” ಎಂದು ಆರೋಪಿಸಿದರು.

“ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು. ಸಚಿವ ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು. ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ. ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಬಿಜೆಪಿಯಲ್ಲಿ ಯಾರೂ ಸಂಧಾನಕ್ಕೆ ಸಿದ್ಧವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...