ಮಾಜಿ ಮುಖ್ಯಮಂತ್ರಿಯ ಹನಿಟ್ರ್ಯಾಪ್ ವಿಡಿಯೋ ಮುನಿರತ್ನ ಬಳಿ ಇದೆ: ಸಂತ್ರಸ್ತೆ ಸ್ಫೋಟಕ ಮಾಹಿತಿ

Date:

ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಸ್ಫೋಟಕ ಸಂಗತಿಗಳನ್ನು ಸಂತ್ರಸ್ತೆ ಹೊರ ಹಾಕಿದ್ದಾರೆ.

ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್​​ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂತ್ರಸ್ತೆ, “ಮಾಜಿ ಮುಖ್ಯಮಂತ್ರಿಯನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ವಿಡಿಯೋ‌ ಅವರ ಬಳಿಯಿದ್ದು, ಆ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮೂಲಕ ಮುನಿರತ್ನ ಮಂತ್ರಿಯಾಗಿದ್ದರು” ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

2020ರಲ್ಲಿಮಮತಾ, ವೆಂಕಟೇಶ್ ಎಂಬುವರ ಮೂಲಕ ಮುನಿರತ್ನ ಪರಿಚಯವಾಗಿದ್ದಾರೆ. ಒಂದು ದಿನ ನನಗೆ ವಿಡಿಯೋ ಕರೆ ಮಾಡಿದ್ದರು. ನನ್ನ ಕರೆಯಿಸಿಕೊಂಡು ಗೋದಾಮಿನ ಬಳಿ ಕರೆದುಕೊಂಡು ಹೋಗಿ, ನನ್ನನ್ನು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರಿಗೆ ಜಾಮೀನು ಸಿಕ್ಕು ಹೊರ ಬಂದರೆ ಅವರಿಂದ ನನಗೆ ಜೀವ ಭಯ ಇದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

“ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದಾರೆ. ಜತೆಗೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು” ಎಂದು ಸಂತ್ರಸ್ತೆ ಈಗಾಗಲೇ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಮಾಜಿ ಮುಖ್ಯಮಂತ್ರಿಗಳೊಬ್ಬರನ್ನು ಹನಿಟ್ರ್ಯಾಪ್ ಮಾಡಿರುವ ಆರೋಪ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...