ಹನಿಟ್ರ್ಯಾಪ್‌ | 17 ಶಾಸಕರ ಸಿ.ಡಿ ಪ್ರಕರಣ ಸಿಬಿಐಗೆ ಬಿಜೆಪಿ ಏಕೆ ಕೊಡಲಿಲ್ಲ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Date:

ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ 17 ಶಾಸಕರು ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ ವಹಿಸಲಿಲ್ಲ. ಏನೇ ನಡೆದರೂ ಅದನ್ನು ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕುಟುಕಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, “ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಕರಣ ನಡೆದಾಗ ಬಿಜೆಪಿಯವರೆಲ್ಲ ತಡೆಯಾಜ್ಞೆ ತಂದಿದ್ದರು, ಅದರ ಬದಲು ಸಿಬಿಐ ತನಿಖೆಗೆ ವಹಿಸಲಿಲ್ಲ ಏಕೆ? ರಾಜ್ಯದಲ್ಲಿ ಹನಿಟ್ರ್ಯಾಪ್ ಅನಿಷ್ಠವನ್ನು ಪರಿಚಯಿಸಿದ್ದೇ ಬಿಜೆಪಿಯವರು ಎನ್ನುವುದಕ್ಕೆ ಬಿಜೆಪಿ ಪಕ್ಷದವರ ಹೇಳಿಕೆಗಳೇ ಸಾಕ್ಷಿಯಾಗಿ ನಿಲ್ಲುತ್ತವೆ. ಅಪ್ಪ ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿಡಿ ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ ಶಾಸಕರು ತಡೆಯಾಜ್ಞೆಯನ್ನು ಪಡೆದಿದ್ದರು” ಎಂದಿದ್ದಾರೆ.

“ಈಗಾಗಲೇ ಸಿಬಿಐ ಮುಂದೆ ರಾಜ್ಯದ 74 ಪ್ರಕರಣಗಳು ತನಿಖೆಗೆ ಬಾಕಿ ಇರುವಾಗ ಬಿಜೆಪಿಯವರು ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳುವ ಮೂಲಕ ತಮ್ಮ ತಿಳುವಳಿಕೆಯ ಕೊರತೆಯನ್ನು ಮತ್ತೊಮ್ಮೆ ಸಾಬೀತು ಮಾಡಿಕೊಂಡಿದ್ದಾರೆ. ಹನಿಟ್ರ್ಯಾಪ್ ಕುರಿತು ಚರ್ಚೆಯಾಗುತ್ತಿದೆಯೇ ಹೊರತು ಈವರೆಗೆ ಯಾವುದೇ ದೂರು ದಾಖಲಾಗಿಲ್ಲ, ದೂರು ದಾಖಲಾದರೆ ಸಮರ್ಥವಾಗಿ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಸಮರ್ಥರಾಗಿರುವ ಅಧಿಕಾರಿಗಳಿದ್ದಾರೆ, ಇಷ್ಟಕ್ಕೂ ಹನಿಟ್ರ್ಯಾಪ್ ವಿಷಯ ಬಗ್ಗೆ ಬಿಜೆಪಿಯವರು ಇಷ್ಟು ಆಸಕ್ತಿ ವಹಿಸುವುದಕ್ಕೆ ಕಾರಣವೇನು, ಭಯವೋ, ಕಾಳಜಿಯೋ?” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾನವ ಸಂಪನ್ಮೂಲದ ಕೊರತೆ ಇರುವುದರಿಂದ ಅನಗತ್ಯವಾಗಿ ಪ್ರಕರಣಗಳನ್ನು ನಮಗೆ ವಹಿಸಬೇಡಿ ಎಂದು ಸಿಬಿಐ ಹೇಳಿರುವ ಬಗ್ಗೆ ಬಿಜೆಪಿಯವರಿಗೆ ಅರಿವಿದೆಯೇ? ಇಷ್ಟಕ್ಕೂ ಸಿಬಿಐ ತನಿಖೆಗೆ ವಹಿಸಿದರೆ ಮಾನವ ಸಂಪನ್ಮೂಲವನ್ನು ರಾಜ್ಯ ಸರ್ಕಾರವೇ ಒದಗಿಸಿಕೊಡಬೇಕಾಗಿದೆ, 2024ರ ಜುಲೈ 17ರಂದೇ ಸಿಬಿಐ ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರ ಬರೆದಿತ್ತು, ರಾಜ್ಯದ ಅಧಿಕಾರಿಗಳಿಗೆ ತನಿಖೆ ನಡೆಸುವ ಸಾಮರ್ಥ್ಯ ಇರುವಾಗ ಸಿಬಿಐ ತನಿಖೆಯ ಅಗತ್ಯ ಏನಿದೆ” ಎಂದು ಪ್ರಿಯಾಂಕ್‌ ಖರ್ಗೆ ಪ್ರಶಿಸಿದ್ದಾರೆ.

“ಈ ಹಿಂದೆ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರವೇ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವಹಿಸಿದೆ ಎನ್ನುವುದನ್ನು ಬಿಜೆಪಿಗರು ನೆನಪು ಮಾಡಿಕೊಳ್ಳಲಿ, ಸಿಬಿಐಗೆ ವಹಿಸಿದ ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆಯ ಪ್ರಕರಣ, ಡಿ.ಕೆ ರವಿ ಆತ್ಮಹತ್ಯೆ ಪ್ರಕರಣ, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಜ್ಯದ ತನಿಖಾ ಸಂಸ್ಥೆಗಳು ಹೇಳಿದ್ದನ್ನೇ ಸಿಬಿಐ ಕೂಡ ತನ್ನ ತನಿಖಾ ವರದಿಯಲ್ಲಿ ಹೇಳಿದೆ. ಇದು ರಾಜ್ಯದ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಸಚಿವರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...