ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಹೂಡಾ ಕಾರಣ: ಬಿಕೆಯು

Date:

ಹರಿಯಾಣದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿತ್ತು. ಕಾಂಗ್ರೆಸ್‌ ಪರವಾದ ಅಲೆಯೂ ಇತ್ತು. ರೈತ ಹೋರಾಟವು ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವ ವಾತಾವರಣ ನಿರ್ಮಿಸಿತ್ತು. ಆದರೆ, ಕಾಂಗ್ರೆಸ್‌ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಮೂರ್ಖತನದಿಂದಾಗಿ ಎಲ್ಲವೂ ತಲೆಕೆಳಗಾಯಿತು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ಗುರ್ನಾಮ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭೂಪಿಂದರ್ ಹೂಡಾ ಅಪ್ಪಟ ಮೂರ್ಖ. ರೈತರು ಹರಿಯಾಣದಲ್ಲಿ ಕಾಂಗ್ರೆಸ್ ಪರವಾದ ಅಲೆ ಸೃಷ್ಠಿಸಿದದರು. ಆದರೆ, ಹೂಡಾ ಯಾವುದಕ್ಕೂ ರಾಜಿ ಮಾಡಿಕೊಳ್ಳಲಿಲ್ಲ. ಪಕ್ಷವೂ ಎಲ್ಲವನ್ನೂ ಆತನಿಗೇ ಬಿಟ್ಟುಕೊಟ್ಟಿತು. ಪರಿಣಾಮ, ಕಾಂಗ್ರೆಸ್ ಸೋಲುಂಡಿತು” ಎಂದು ಅವರು ಹೇಳಿದ್ದಾರೆ.

“ಈಗಲಾದರೂ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚೆತ್ತುಕೊಳ್ಳಬೇಕು. ಹರಿಯಾಣ ವಿಧಾನಸಭೆಯಲ್ಲಿ ವಿಪಕ್ಷ ನಾಯಕನನ್ನಾಗಿ ಭೂಪಿಂದರ್ ಹೂಡಾರನ್ನು ಆಯ್ಕೆಮಾಡಬಾರದು. ಕಳೆದ 10 ವರ್ಷಗಳಲ್ಲಿ ವಿಪಕ್ಷ ನಾಯಕನಾಗಿ ಹೂಡಾ ಎಂದಿಗೂ ತನ್ನ ಜವಾಬ್ದಾರಿಯನ್ನು ನಿಭಾಯಿಸಿಲ್ಲ. ನಿಜವಾಗಿಯೂ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದು ಬಿಕೆಯು ಮತ್ತು ರೈತರು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...