ಸಚಿವೆ ಹೆಬ್ಬಾಳ್ಕರ್ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು:‌ ಹೆಚ್‌ ಡಿ ಕುಮಾರಸ್ವಾಮಿ

Date:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬಗ್ಗೆ ಸಿ ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಆದರೆ, ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, “ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ” ಎಂದಿದ್ದಾರೆ.

“ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ. ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

“ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು. ಪೊಲೀಸರೇ, ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ” ಎಂದು ಗುಡುಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...