ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

Date:

  • ‘ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?’ ಹೈಕೋರ್ಟ್‌ ಕಿಡಿ
  • ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ಎಂದು ಪ್ರಶ್ನಿಸಿದ ನ್ಯಾಯಾಧೀಶರು

ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವುದಾಗಿ ‘ಬಾರ್ & ಬೆಂಚ್‘ ವರದಿ ಮಾಡಿದೆ.

ಬಾಕಿ ಪಾವತಿ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸದ ಬಿಬಿಎಂಪಿ ವಿರುದ್ಧ ಮೆಸರ್ಸ್ ನಿಕ್ಷೇಪ್ ಇನಾಫ್ರಾ ಪ್ರಾಜೆಕ್ಟ್ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿಯ ವಿಚಾರಣೆಯ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ ನ್ಯಾಯಾಧೀಶರು, “ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಖಾರವಾಗಿ ಮೌಖಿಕವಾಗಿ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ನಿಮ್ಮ ದಾಖಲೆ ಪರಿಶೀಲಿಸಿ, ಗುತ್ತಿಗೆದಾರರನ್ನು ಮೂಲೆಗುಂಪು ಮಾಡಬೇಡಿ. ಬಾಕಿ ಪಾವತಿಗೆ ಬಿಬಿಎಂಪಿ ಅನುಸರಿಸುತ್ತಿರುವ ವಿಧಾನವೇ ತಿಳಿಯುತ್ತಿಲ್ಲ. ಕಲ್ಯಾಣ ರಾಜ್ಯವೊಂದರಲ್ಲಿ ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆಗಳು ಟೆಂಡರ್ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಮೊತ್ತ ಪಾವತಿಗೆ ಷರತ್ತುಗಳನ್ನು ಹಾಕುವುದು, ಅನಗತ್ಯ ವಿಳಂಬ ಮಾಡುವುದು ಎಷ್ಟರಮಟ್ಟಿಗೆ ಸರಿ?” ಎಂದು ಪ್ರಶ್ನಿಸಿತು.

“ನಾವು 2023ರ ಅಕ್ಟೋಬರ್‌ 30ರ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಬಾಕಿ ಪಾವತಿಗೆ ಮೀನಮೇಷ ಎಣಿಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದು ಸರಿಯೇ? ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಿರುವ ಬಗ್ಗೆ ಯಾವುದೇ ವಿವಾದವಿಲ್ಲ. ಕಾಮಗಾರಿ ಸ್ಥಗಿತಗೊಳಿಸಿ ಅದು ಅರ್ಧಕ್ಕೆ ನಿಂತಿರುವ ಪರಿಸ್ಥಿತಿಯೂ ಇಲ್ಲ. ಕಾಮಗಾರಿ ಪೂರ್ಣಗೊಳಿಸಿದ ನಂತರ ನೀವು ಕಾಯಿಸುತ್ತೀರಿ ಎಂದರೆ ಹೇಗೆ? ಎಂದು ಪ್ರಶ್ನಿಸುವ ಮೂಲಕ ಬಾಕಿ ಹಣ ಪಾವತಿಗೆ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯನ್ನು ಪ್ರಶ್ನಿಸಿದ ಪೀಠವು, ‘ನಿಮ್ಮಲ್ಲಿ ಹಣ ಇಲ್ಲವೇ?’ ಎಂದು ಕೇಳಿತು. ನ್ಯಾ. ಕೃಷ್ಣ ದೀಕ್ಷಿತ್ ಅವರು, ”ನಿಮ್ಮ ಬಳಿ ಹಣ ಇಲ್ಲವೇ? ಇಲ್ಲವಾದರೆ ಹೇಳಿ ಬಿಡಿ, ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ನಿಮ್ಮ ಬಳಿ ಮಾರ್ಗಸೂಚಿ ಇದೆಯೇ, ಸರಿಯಾಗಿ ಹೇಳಿ” ಎಂದು ಸರ್ಕಾರದ ವಕೀಲರನ್ನು ಖಾರವಾಗಿ ಪ್ರಶ್ನಿಸಿದರು.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ ಅವರು ಕೆಲವು ನಕಲಿ ಬಿಲ್‌ಗಳ ವಿಚಾರ ಪ್ರಸ್ತಾಪಿಸಿದಾಗ ನ್ಯಾಯಾಲಯವು, ‘ಆದಕ್ಕೂ ಈ ಅರ್ಜಿದಾರರಿಗೂ ಸಂಬಂಧ ಇಲ್ಲ, ಒಂದು ವೇಳೆ ನೀವು ಸ್ವಚ್ಛಗೊಳಿಸುವ (ಕ್ಲೀನ್ ಅಪ್) ಕಾರ್ಯಾಚರಣೆ ಆರಂಭಿಸಿದರೆ ಅದನ್ನು ಮೊದಲು ನಿಮ್ಮ ಮನೆಯಿಂದ ಆರಂಭಿಸಿ. ನೀವು ನಿಮ್ಮ ಅಧಿಕಾರಿಗಳ ವಿರುದ್ಧ ಏನಾದರೂ ಕ್ರಮ ಕೈಗೊಂಡಿದ್ದೀರಾ, ಹಾಗಿದ್ದರೆ ಹೇಳಿ? ನಾವು ನಮ್ಮ ಆದೇಶದಲ್ಲಿ ಅತ್ಯಂತ ಸ್ಪಷ್ಟವಾಗಿ ಹೇಳಿದ್ದೇವೆ. ರಾಜ್ಯ ಸರ್ಕಾರ ಸ್ವಲ್ಪ ವಿವೇಚನೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಪೀಠ ತಿಳಿಸಿತು.

ಇದನ್ನು ಓದಿದ್ದೀರಾ? ಕಡ್ಲೇಪುರಿಯಂತೆ ಸೇಲ್ ಆಗುವ ಪ್ರಶಸ್ತಿ ಪುರಸ್ಕಾರಗಳು ಮತ್ತು ಸಾಂಸ್ಕೃತಿಕ ರಾಜಕಾರಣ

ಬಿಬಿಎಂಪಿ ಪರ ವಕೀಲರು ಕೆಲವು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಕ್ಕೆ, ಪೀಠವು ನಾವು ಹಿಂದಿನ ಆದೇಶದಲ್ಲಿ ಉಲ್ಲೇಖಿಸಿದಂತೆ ರಾಜ್ಯ ಸರ್ಕಾರವೇ ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದೆ ಎಂದು ಆದೇಶಿಸಿ, ವಿಚಾರಣೆಯನ್ನು ಡಿಸೆಂಬರ್‌ 13ಕ್ಕೆ ಮುಂದೂಡಿತು.

ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ, ಅರ್ಜಿದಾರರು ನಗರಾಭಿವೃದ್ಧಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ವಾಣಿ, ಬಿಬಿಎಂಪಿ ಮಲ್ಲೇಶ್ವರಂ ವಿಭಾಗದ ಕಾರ್ಯಕಾರಿ ಎಂಜಿನಿಯರ್ ಜೈಶಂಕರ್ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...