ಟಿಕೆಟ್ ಕೊಡುವಾಗ ಎಷ್ಟು ಕೋಟಿ ಖರ್ಚು ಮಾಡಬಲ್ಲ ಎಂಬುದೇ ಪ್ರಮುಖವಾಗಿದೆ: ಸಭಾಪತಿ ಹೊರಟ್ಟಿ

Date:

ಹಣ ಕೊಟ್ಟು ಮತ ಕೇಳುವವರು ಹಾಗೂ ಹಣ ಪಡೆದು ಮತ ಹಾಕುವವರು ಇರುವವರೆಗೂ ಪ್ರಜಾಪ್ರಭುತ್ವ ಸುಭದ್ರವಾಗಿರುದಿಲ್ಲ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಇತಿಹಾಸ, ರಾಜ್ಯಶಾಸ್ತ್ರ ಹಾಗೂ ಪತ್ರಿಕೋದ್ಯಮ ವಿಭಾಗಗಳು ಮತ್ತು ರಾಜ್ಯ ಪತ್ರಾಗಾರ ಇಲಾಖೆಯ ವಿಭಾಗೀಯ ಕಚೇರಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೈಸೂರು ಪ್ರಜಾಪ್ರತಿನಿಧಿ ಸಭೆ: ಚಾರಿತ್ರಿಕ ಅವಲೋಕನ’ ಕುರಿತ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

“ಎಲ್ಲ ಕ್ಷೇತ್ರಗಳಂತೆಯೇ ರಾಜಕಾರಣದಲ್ಲೂ ಗುಣಮಟ್ಟ ಕುಸಿದಿದೆ. ಪ್ರತಿ ಪಕ್ಷದಲ್ಲೂ ಜಾತಿ ನೋಡುತ್ತಾರೆ, ಟಿಕೆಟ್ ಕೊಡುವಾಗ ಹಣವೆಷ್ಟಿದೆ; ಎಷ್ಟು ಕೋಟಿ ಖರ್ಚು ಮಾಡಬಲ್ಲ ಎಂಬುದನ್ನೇ ಪ್ರಮುಖವಾಗಿ ಗಮನಿಸುವುದು ನಡೆಯುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನಮಂಡಲ ಅಧಿವೇಶನದಲ್ಲಿ ಬಹಳಷ್ಟು ಶಾಸಕರು-ವಿಧಾನಪರಿಷತ್‌ ಸದಸ್ಯರು ಸಕ್ರಿಯವಾಗಿ ಭಾಗವಹಿಸುವುದಿಲ್ಲ. ಪ್ರಶ್ನೆ ಕೇಳುತ್ತಾರೆ, ಉತ್ತರ ತೆಗೆದುಕೊಂಡು ಹೋಗಿ ಬಿಡುತ್ತಾರೆ. ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ತಿಳಿಸಿದರು.

“ಯುವಜನರು ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯಬಾರದು. ರಾಜಕಾರಣ ಹಾಳಾಗಿದೆ ಎಂದು ಎಲ್ಲರೂ ದೂರಹೋದರೆ ಮುಂದೇನು? ಪ್ರಜಾಪ್ರಭುತ್ವದಲ್ಲಿ ಒಳ್ಳೆಯದೂ ಆಗುತ್ತಿದೆ. ಕೆಟ್ಟದ್ದೂ ಆಗುತ್ತಿದೆ. ಪ್ರಜ್ಞಾವಂತರು, ಆದ್ದರಿಂದ ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು. ಶಾಸನಸಭೆಗಳನ್ನು ಪ್ರವೇಶಿಸಬೇಕು. ಸರ್ಕಾರಿ ನೌಕರಿ ಪಡೆದುಕೊಂಡರೆ ಸಾಕು ಎಂದು ಭಾವಿಸಬಾರದು” ಎಂದು ಹೇಳಿದರು.

ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...