‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’; ರೈಲು ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳದ ಕೇಂದ್ರದ ವಿರುದ್ಧ ರಾಹುಲ್ ಕಿಡಿ

Date:

ತಮಿಳುನಾಡಿನ ಚೆನ್ನೈ ಬಳಿ ರೈಲು ಅಪಘಾತ ಸಂಭವಿಸಿದ್ದು, ಮೈಸೂರು-ಧರ್ಬಾಂಗ್‌ ಭಾಗ್ಮತಿ ಎಕ್ಸ್‌ಪ್ರೆಸ್‌ ರೈಲು ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಈ ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, “ಹಲವಾರು ರೈಲು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡಿದ್ದರೂ, ಕೇಂದ್ರ ಸರ್ಕಾರ ಯಾವುದೇ ಪಾಠ ಕಲಿತಿಲ್ಲ. ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು?” ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಹಲವಾರು ರೈಲು ಅಪಘಾತಗಳು ಸಂಭವಿಸಿವೆ. ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೂ, ರೈಲು ಅಪಘಾತಗಳನ್ನು ತಪ್ಪಿಸಲು ಯಾವುದೇ ಗಂಭೀರ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಹೀಗಾಗಿ, ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ. “ಜವಾಬ್ದಾರಿಯು ಮೇಲ್ಭಾಗದಿಂದ (ಕೇಂದ್ರದಿಂದ) ಪ್ರಾರಂಭವಾಗುತ್ತದೆ. ರೈಲು ಅಪಘಾತಗಳು ಸಂಭವಿಸಿದಾಗ ಅದನ್ನು ಕೆಳ ಹಂತದ ಸಿಬ್ಬಂದಿಯ ತಲೆಗೆ ಕಟ್ಟಬೇಡಿ” ಎಂದಿದ್ದಾರೆ.

ಈ ಬಗ್ಗೆ ‘ಎಕ್ಸ್‌‘ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್ ಗಾಂಧಿ, “ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ. ಒಂದು ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ಉತ್ತರದಾಯಿತ್ವವು ಮೇಲ್ಭಾಗದಿಂದ ಪ್ರಾರಂಭವಾಗುತ್ತದೆ. ಈ ಸರ್ಕಾರವು ಎಚ್ಚೆತ್ತುಕೊಳ್ಳುವ ಮೊದಲು ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರೈಲು ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ. ಒಂದರ ನಂತರ ಒಂದರಂತೆ ಸಂಭವಿಸುತ್ತಿದ್ದರೂ, ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಅವರು ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುರಕ್ಷಿತ ರೈಲು ಪ್ರಯಾಣದ ಹೊಣೆಗಾರಿಕೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಳ್ಳದ ಕಾರಣ, ದೇಶದ ಕೋಟಿಗಟ್ಟಲೆ ಜನ ಸಾಮಾನ್ಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭಯ ಮತ್ತು ಅವ್ಯವಸ್ಥೆಯ ಚಕ್ರಗಳ ಮೇಲೆ ಓಡುವ ರೈಲುಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮತ್ತೊಮ್ಮೆ, ತಮಿಳುನಾಡಿನಲ್ಲಿ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಲಸೋರ್‌ನಂತಹ ಅಪಘಾತ ಸಂಭವಿಸಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...