ಹುಬ್ಬಳ್ಳಿ | ಉಪ್ಪು ತಿಂದ ಮನೆಗೆ ದ್ರೋಹ ಬಗೆದ ಜಗದೀಶ ಶೆಟ್ಟರ್: ಕೆಪಿಸಿಸಿ ವಕ್ತಾರ ಗಂಗಾಧರ

Date:

ಬಿಜೆಪಿಯಲ್ಲಿ ಮುಖಕ್ಕೆ ಮಂಗಳಾರತಿ ಮಾಡಿ ಮೂಲೆಗುಂಪು ಮಾಡಿದಾಗ ರತ್ನಗಂಬಳಿ ಹಾಸಿ ಸ್ವಾಗತಿಸಿ ರಾಜಕೀಯ ಜೀವದಾನ ನೀಡಿದ್ದ ಕಾಂಗ್ರೆಸ್‌ಗೆ ಜಗದೀಶ್‌ ಶೆಟ್ಟರ್ ದ್ರೋಹ ಬಗೆದಿದ್ದಾರೆ. ಅವರ ನಡೆ ಉಪ್ಪುತಿಂದ ಮನೆಗೆ ದ್ರೋಹ ಬಗೆದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಕಿಡಿಕಾರಿದ್ದಾರೆ.

ಜಗದೀಶ್‌ ಶೆಟ್ಟರ್‌ ಮರಳಿ ಬಿಜೆಪಿ ಸೇರಿರುವ ಬಗ್ಗೆ ಪ್ರತಿಕ್ರಿಯಿಸಿ ದೊಡವಾಡ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಯುದ್ಧದಲ್ಲಿದ್ದು ತಮ್ಮ ಸೈನ್ಯವನ್ನೇ ತಾವು ಸೋಲಿಸಲು ಕುತಂತ್ರ ಮಾಡಿದಂತೆ, ಜಗದೀಶ ಶೆಟ್ಟರ್ ಕಾಂಗ್ರೆಸ್ ಮಾಡಿದ ಉಪಕಾರಕ್ಕೆ ದ್ರೋಹ ಬಗೆದಿದ್ದಾರೆ. ಇಂಥವರು ಯಾವ ಪಕ್ಷದಲ್ಲಿದ್ದರೂ ದ್ರೋಹ ಬಗೆಯುವುದು ಖಚಿತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಗದೀಶ್ ಶೆಟ್ಟರ್ ಸೋತರೂ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಕಾಂಗ್ರೆಸ್ ನೀಡಿತ್ತು. ರಾಜಕಾರಣಿಗಳು ಮುಂದಿನ ಪೀಳಿಗೆಗೆ ಉತ್ತಮ‌ ನಡೆಯನ್ನು ಉಳಿಸಿ ಹೋಗಬೇಕು. ಆದರೆ, ಶೆಟ್ಟರ್ ಅವರದ್ದು ಉತ್ತಮ‌ ರಾಜಕಾರಣಿಯ ನಡೆ ಅಲ್ಲ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...