ಹುಬ್ಬಳ್ಳಿ ಗಲಭೆ ಪ್ರಕರಣ | ಸರ್ಕಾರ ನಿರ್ಧಾರ ಬದಲಿಸದಿದ್ದರೆ ಉಗ್ರ ಹೋರಾಟ: ಜಗದೀಶ್‌ ಶೆಟ್ಟರ್

Date:

ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುವ ನಿರ್ಧಾರದ ಹಿಂದೆ ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ತಂತ್ರ ಅಡಗಿದೆ. ಈ ಮೂಲಕ ಕಾಂಗ್ರೆಸ್‌ ಸರ್ಕಾರವು ಕಾನೂನುಬಾಹಿರ ಕೆಲಸ ಮಾಡಿ, ಕ್ಯಾಬಿನೆಟ್‌ ದುರುಪಯೋಗ ಪಡಿಸಿಕೊಂಡಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಕಿಡಿಕಾರಿದರು.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಇದು ದಂಗೆ ಪ್ರಕರಣ. ಹಲವರು ಪೊಲೀಸ್ ಠಾಣೆ, ಮನೆಗಳ ಮೇಲೆ ದಾಳಿ ಮಾಡಿದ್ದರು. ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಯಾಗಿತ್ತು. ಆದರೆ, ಪೊಲೀಸರ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿತ್ತು. ಗಂಭೀರವಾದ ಈ ಪ್ರಕರಣ ಹಿಂದಕ್ಕೆ ಪಡೆಯುವ ಕುರಿತಾಗಿ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ವಾಪಸ್‌ ಪಡೆಯದಿದ್ದರೆ, ಬಿಜೆಪಿಯಿಂದ ಉಗ್ರಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಅವರು, ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾದವರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಆದರೆ, ಈ ಪ್ರಕರಣ ಹಿಂದಕ್ಕೆ ಪಡೆಯುವಂಥದ್ದಲ್ಲ. ಇದನ್ನು ವಾಪಸ್‌ ಪಡೆಯುವುದಾದರೆ, ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ಪ್ರಕರಣ ಏಕೆ ಹಿಂದಕ್ಕೆ ಪಡೆಯಲಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳಸಾ–ಬಂಡೂರಿ, ಮಹದಾಯಿ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್‌, ‘ಕೇಂದ್ರ ಪರಿಸರ ಇಲಾಖೆ ಸಚಿವರಿಗೆ ಭೇಟಿಯಾಗಿ ಈ ವಿಷಯ ಮನವರಿಕೆ ಮಾಡಿಕೊಟ್ಟಿರುವೆ. ಈ ಬಗ್ಗೆ ತ್ವರಿತವಾಗಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. ಕಾಮಗಾರಿ ಆರಂಭಕ್ಕಾಗಿ ಎಲ್ಲ ಹಂತದಲ್ಲೂ ಪ್ರಯತ್ನಿಸುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...