ಜೆಡಿಎಸ್ ಜೊತೆಗಿನ ಮೈತ್ರಿಗೆ ನನ್ನ ವಿರೋಧವಿದೆ: ಎಸ್ ಟಿ ಸೋಮಶೇಖರ್

Date:

  • ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಲ್ಲ
  • ಕಾಂಗ್ರೆಸ್ ಜೊತೆಗೂ ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ.‌ ಯಾವತ್ತೂ ಕೂಡ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಲ್ಲ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಬಿಜೆಪಿ ಜೊತೆಗೂ ನೋಡಿದ್ದೇನೆ. ಕಾಂಗ್ರೆಸ್‌ಗೆ ಜೆಡಿಎಸ್‌ ಮೊದಲಿನಿಂದಲೂ ವಿರೋಧ ಇದೆ” ಎಂದರು.

“ಜೆಡಿಎಸ್‌ನಲ್ಲಿ ಮಾನಸಿಕವಾಗಿ ಕಿರುಕುಳ‌ ಇದೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ನನ್ನ ಮುಂದಿನ ನಿರ್ಧಾರ ಮಾಡುವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇತ್ತು. ಆ ಸಂದರ್ಭದಲ್ಲಿ ಒಂದು ಪಕ್ಷದ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಪರಸ್ಪರ ಮತ ಹಾಕಲಿಲ್ಲ. ಆದರೆ ಯಾರೂ ಕೂಡ ಈ ಬಗ್ಗೆ ವೈಯಕ್ತಿಕವಾಗಿ ಮಾತನಾಡುತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ಎಲ್ಲರಿಗೂ ಅಸಮಾಧಾನ ಇದೆ. ಆದರೆ ಈ ಕುರಿತಾಗಿ ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚೆ ಮಾಡಿಲ್ಲ. ನನ್ನ ಕ್ಷೇತ್ರ ಅಷ್ಟೇ ಅಲ್ಲ, ಆರ್. ಅಶೋಕ್, ಮುನಿರತ್ನ, ದಾಸರಹಳ್ಳಿ ಕ್ಷೇತ್ರಗಳಲ್ಲೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಹೋಗಿದ್ದಾರೆ. ಮೈತ್ರಿ ಬಳಿಕ ಪಕ್ಷದಲ್ಲಿ ಉಳಿಯಬೇಕೋ ಅಥವಾ ಬೇಡವೋ ಎಂಬುದು ನಿರ್ಧರಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಎಂಎಲ್‌ಎ ಟಿಕೆಟ್ ವಂಚನೆ | ಹಾಲಶ್ರೀ ಟೀಮ್‌ನ​ ಮತ್ತೊಂದು ಭಾನಗಡಿ ಬಯಲು

“ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಮಗೆ ಉಸಿರು ಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲೂ ಹಾಗೆಯೇ ಆಗಿತ್ತು. ನಾವು ಹೊರಗಡೆ ಬಂದ ಉದ್ದೇಶ ಏನು? ರಾಹುಲ್ ಗಾಂಧಿ ಮತ್ತು ದೇವೇಗೌಡರ ನೇತೃತ್ವದಲ್ಲಿ ಅಂದು ಚುನಾವಣೆ ಮಾಡಿದ್ರು. ನಾವು ನಾವು ಒಂದಾಗಬಹುದು. ಆದರೆ ಕೆಳಮಟ್ಟದ ಕಾರ್ಯಕರ್ತರಿಗೆ ಹಿಂಸೆಯಾಗಿದೆ” ಎಂದು ಹೇಳಿದರು.

“ನಮಗೆ ಹೈಕಮಾಂಡ್ ಅಂದರೆ ಯಡಿಯೂರಪ್ಪ. ನಾನು ಹೇಳುವವರೆಗೂ ಏನೂ ಮಾಡಬೇಡಿ ಅಂತ ಅವರು ಹೇಳಿದ್ದಾರೆ.‌ ಅದಕ್ಕೆ ನಾನೆಲ್ಲೂ ಒಂದು ತಿಂಗಳಿಂದ ಏನು ಮಾತನಾಡಿಲ್ಲ. ಅವರು ಏನೋ ಹೇಳಿದ್ದಾರೆ, ಹಾಗಾಗಿ ಅಲ್ಲಿಯವರೆಗೂ ಮಾತನಾಡಲ್ಲ. ಯಾವುದೇ ನಿರ್ಧಾರ ತೆಗೆದುಕೊಳ್ಳಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...