ನಾನು ಬನಿಯಾ, ಯೋಜನೆಗಳಿಗೆ ಹಣ ಹೊಂದಿಸುತ್ತೇನೆ: ಅರವಿಂದ್ ಕೇಜ್ರಿವಾಲ್

Date:

ದೆಹಲಿ ವಿಧಾನಸಭೆ ಚುನಾವಣೆಗೆ ಹತ್ತು ದಿನಗಳಿಗಿಂತ ಕಡಿಮೆ ಅವಧಿ ಇರುವಾಗ ನಿನ್ನೆ ಎಎಪಿ ತನ್ನ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದಾದ ಬಳಿಕ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ತನ್ನ ಜಾತಿಯನ್ನು ಒತ್ತಿ ಹೇಳಿದರು. “ನಾನು ಬನಿಯಾ, ನಾನು ಭರವಸೆ ನೀಡಿದ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಬೇಕು ಎಂದು ನನಗೆ ತಿಳಿದಿದೆ” ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

ದೆಹಲಿ ಮಾಜಿ ಮುಖ್ಯಮಂತ್ರಿ ಪಾಲಂ, ಮಟಿಯಾಲ ಮತ್ತು ಬಿಜ್ವಾಸನ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಸಭೆಗಳಲ್ಲಿ ಕೇಜ್ರಿವಾಲ್ ಎಎಪಿ ಆಡಳಿತ ಮಾದರಿಯ ಬಗ್ಗೆ ಮಾತನಾಡಿದರು. ಹಾಗೆಯೇ ಉಚಿತ ವಿದ್ಯುತ್, ನೀರು, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಕಲ್ಯಾಣ ಯೋಜನೆಗಳ ಕುರಿತು ಪ್ರಶ್ನೆಗಳು ಮತ್ತು ಟೀಕೆಗಳಿಗೆ ಉತ್ತರಿಸಿದರು.

ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ: ದೆಹಲಿ ಸಿಎಂ ಗಂಭೀರ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಎಎಪಿ ವಿಧಾನವನ್ನು ಬಿಜೆಪಿಯೊಂದಿಗೆ ಹೋಲಿಸಿದ ಕೇಜ್ರಿವಾಲ್, “ಎಎಪಿ ಸಾಮಾನ್ಯ ಜನರಿಗಾಗಿ ಇರುವ ಪಕ್ಷವಾಗಿದೆ, ಆದರೆ ಬಿಜೆಪಿ ಶ್ರೀಮಂತರಿಗಾಗಿ ಇರುವ ಪಕ್ಷವಾಗಿದೆ” ಎಂದಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಎಎಪಿಯ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರಿ ಶಾಲೆಗಳು, ವಿದ್ಯುತ್ ಮತ್ತು ಬಸ್ ಪ್ರಯಾಣದಂತಹ ಉಚಿತ ಸೌಲಭ್ಯಗಳನ್ನು ಮುಚ್ಚುವುದಾಗಿ ಬಿಜೆಪಿ ಹೇಳಿದೆ. ಶಾಲೆಗಳನ್ನು ನಿರ್ಮಿಸುವ ಎಎಪಿ ಬೇಕೋ ಅಥವಾ ಅವುಗಳನ್ನು ಮುಚ್ಚುವ ಬಿಜೆಪಿ ಬೇಕೋ ಎಂಬುದನ್ನು ನಿರ್ಧರಿಸುವುದು ನಿಮಗೆ ಬಿಟ್ಟದ್ದು” ಎಂದು ಜನರಿಗೆ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು: ಅರವಿಂದ್ ಕೇಜ್ರಿವಾಲ್

ಎಎಪಿ ಆಡಳಿತ ಮಾದರಿಯ ಬಗ್ಗೆ ವಿವರಿಸಿದ ಕೇಜ್ರಿವಾಲ್, ದೆಹಲಿಯ ಪ್ರತಿ ಮನೆಗೆ ತಿಂಗಳಿಗೆ 25,000 ರೂ. ಮೌಲ್ಯದ ನೇರ ಪ್ರಯೋಜನಗಳನ್ನು ಒದಗಿಸಲಾಗುವುದು. ಆದರೆ ಬಿಜೆಪಿ ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ತನ್ನ ‘ಶ್ರೀಮಂತ ಸ್ನೇಹಿತರ’ ಸಾಲವನ್ನು ಮನ್ನಾ ಮಾಡುತ್ತದೆ ಎಂದು ಆರೋಪಿಸಿದರು.

ದೆಹಲಿ ವಿಧಾನಸಭೆ ಚುನಾವಣೆ ಫೆಬ್ರವರಿ 5ರಂದು ನಡೆಯಲಿದ್ದು, ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಎಎಪಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ, ಆದರೆ ಬಿಜೆಪಿ 25 ವರ್ಷಗಳ ನಂತರ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...