ನಾನು ನಾನೇ – ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ – ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಕೆಲವರು ನನ್ನನ್ನು ಎರಡನೇ ದೇವರಾಜು ಅರಸು ಅಂತಾರೆ. ನಾನು ಅರಸು ಆಗಲು ಸಾಧ್ಯವಿಲ್ಲ. ಅರಸು, ಇಂದಿರಾಗಾಂಧಿ, ನೆಹರೂ ಎಲ್ಲರೂ ಭಿನ್ನವಾಗಿದ್ದರು. ಆದರೆ ಇವರೆಲ್ಲರ ಸಾಮಾಜಿಕ ಕೊಡುಗೆಗಳು ಅಪಾರ. ಯಾರ ಕೊಡುಗೆಗಳನ್ನೂ ಅಲ್ಲಗಳೆಯಲಾಗದು. ಒಬ್ಬರು ಇನ್ನೊಬ್ಬರಾಗಲು ಸಾಧ್ಯವಿಲ್ಲ. ಹಾಗೆಯೇ ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ” ಎಂದರು.

“ನಾವು ರೂಪಿಸುವ ಕಾಳಜಿ ಮತ್ತು ಕಾರ್ಯಕ್ರಮಗಳಲ್ಲಿ ಸಾಮಾಜಿಕ ನ್ಯಾಯ ಇರುತ್ತದೆ. ಎಲ್ಲಾ ಹಿಂದುಳಿದ ಜಾತಿ, ಸಮುದಾಯಗಳು ಸಮಾನ ಅವಕಾಶಗಳನ್ನು ಪಡೆದುಕೊಂಡು ಮುಂದುವರೆದಾಗ ಮಾತ್ರ ಇಡೀ ಸಮಾಜ ಮುಂದುವರೆಯುತ್ತದೆ. ಕೆಲವೇ ಜಾತಿ-ಸಮುದಾಯಗಳು ಅವಕಾಶಗಳನ್ನು ಪಡೆದುಕೊಂಡು ಉಳಿದವುಗಳು ಅವಕಾಶ ವಂಚಿತರಾಗುತ್ತಿದ್ದರೆ ಅದನ್ನು ಪ್ರಗತಿ ಪಥದಲ್ಲಿರುವ ಸಮಾಜ ಎಂದು ಕರೆಯಲು ಸಾಧ್ಯವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ ಹೆಚ್ಚು ಮಾಡಲಾಗುವುದು” ಎಂದು ಭರವಸೆ ನೀಡಿದರು.

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು

ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ

ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ ಸಮಾನತೆ ತರಲು ಸಾಧ್ಯ.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ ದ್ವೇಷಿಸದಿರಿ

ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ. ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...