ಗ್ಯಾರಂಟಿಗಳಿಗೆ ಹಣ ಹೊಂದಿಕೆ ಸರ್ಕಾರ ಸ್ಪಷ್ಟಪಡಿಸಬೇಕು, ಎಲ್ಲರಿಗೂ ತಿಳಿಯುವ ಹಕ್ಕಿದೆ: ಬೊಮ್ಮಾಯಿ

Date:

  • ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಬರುವ ಪ್ರಶ್ನೆಯೇ ಇಲ್ಲ
  • ವಿದ್ಯುತ್‌ ದರ ಏರಿಕೆಗೆ ನಾವು ಒಪ್ಪಿಗೆ ಸೂಚಿಸಿರಲಿಲ್ಲ

ಉಚಿತ ಗ್ಯಾರಂಟಿಗಳಿಗೆ ಯಾವ ರೀತಿ ಹಣ ಹೊಂದಿಸುತ್ತಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಇದನ್ನು ತಿಳಿದುಕೊಳ್ಳುವುದು ಎಲ್ಲರ ಹಕ್ಕು. ಆದರೆ, ಯಾರಾದರು ಈ ಬಗ್ಗೆ ಕೇಳಿದರೆ ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ರೀತಿಯ ಧೋರಣೆ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ನಗರದ ತಮ್ಮ‌ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿಗಳ ಹೆಸರಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಳುವುದು ನಡೆಯುತ್ತಿದೆ. ಗ್ಯಾರಂಟಿಗಳ ಬಗ್ಗೆ ನಾವು ಕಾದು ನೋಡುತ್ತೇವೆ. ಫ್ರೀ ಬಸ್ ಮೂಲಕ ಆರಂಭದ ಶೂರತ್ವ ತೋರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಸರಿಪಡಿಸಬೇಕು. ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನೋ ಕಾರಣಕ್ಕೆ ಬಸ್​ಗಳು ತುಂಬಿ ತುಳುಕುತ್ತಿವೆ. ಈ ನಿಟ್ಟಿನಲ್ಲಿ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಹಣಕಾಸಿನ‌ ನಿರ್ವಹಣೆಯಲ್ಲಿ ಯಾವ ರೀತಿ ಮುಂದುವರೆಯುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದೆ. ಉಚಿತ ಗ್ಯಾರಂಟಿಗಳಿಗೆ ಯಾವ ರೀತಿ ಹಣ ಹೊಂದಿಸುತ್ತಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಇದನ್ನು ತಿಳಿದುಕೊಳ್ಳುವುದು ಎಲ್ಲರ ಹಕ್ಕು. ಆದರೆ, ಯಾರಾದರು ಈ ಬಗ್ಗೆ ಕೇಳಿದರೆ ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ರೀತಿಯ ಧೋರಣೆ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲಾಗುತ್ತಿದೆ. ನಾವು ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಒಮ್ಮೆಗೆ ವಿದ್ಯುತ್ ದರ ಏರಿಸುವುದರಿಂದ ಜನ ಶಾಕ್​ನಲ್ಲಿದ್ದಾರೆ. ಜೊತೆಗೆ 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಸ್ಪಷ್ಟತೆಯಿಲ್ಲ. ಎಲ್ಲ ಹೆಸ್ಕಾಂಗಳು ಸಾಲದಲ್ಲಿ ಮುಳುಗಿವೆ. ಪ್ರಸ್ತುತ ಸರ್ಕಾರ ಗ್ಯಾರಂಟಿ ಕೊಡುವುದರಲ್ಲಿಯೇ ಸಮಯ ಕಳೆಯಬಾರದು.‌ ಸಂಸ್ಥೆಗಳನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಸರ್ಕಾರ ಸಬ್ಸಿಡಿ ಕೊಡುವಾಗ ಮುಂಚಿತವಾಗಿಯೇ ಹಣ ಕೊಡಬೇಕು. ಹೀಗಾದರೆ ಮಾತ್ರ ಸಂಸ್ಥೆಗಳು ಉಳಿಯುತ್ತವೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿಗೆ ಟಿಕೆಟ್​ ನೀಡಬಾರದು ಎಂದು ಅಭಿಯಾನ ಕುರಿತು ಮಾತನಾಡಿದ ಬೊಮ್ಮಾಯಿ, ಪ್ರತಿಬಾರಿ ಚುನಾವಣಾ ಪೂರ್ವದಲ್ಲಿ ಇಂತಹ ಅಭಿಯಾನಗಳು ನಡೆಯುತ್ತವೆ. ಅದಕ್ಕೆ ಮಹತ್ವ ಕೊಡುವ ಅಗತ್ಯವಿಲ್ಲ. ಪರಿಷತ್ ಚುನಾವಣೆಯ ಮೂರೂ ಸ್ಥಾನಕ್ಕೆ ನಾವು ಸ್ಪರ್ಧಿಸುತ್ತೇವೆ. ನಮ್ಮಲ್ಲಿಂದ ಪ್ರತಿಪಕ್ಷವಾಗಿ ಸ್ಪರ್ಧೆ ಖಚಿತ ಎಂದು ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ಜೆಡಿಎಸ್​ ಜೊತೆ ಹೊಂದಾಣಿಕೆ ಕುರಿತು ಚರ್ಚೆಗಳು ನಡೆದಿಲ್ಲ. ಜಗದೀಶ್ ಶೆಟ್ಟರ್ ಕಾಂಗ್ರೆಸ್​ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಎಂದು ಅವರೆ ಹೇಳಿಕೊಂಡಿದ್ದಾರೆ. ಹಾಗಿದ್ದಾಗ ಮತ್ತೆ ಬಿಜೆಪಿಗೆ ಬರುವ ಪ್ರಶ್ನೆ ಬರಲ್ಲ ಎಂದು ಹೇಳಿದರು.

ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ, ಆ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ನಾನು ಅದನ್ನು ಬಯಸಲು ಹೋಗುತ್ತಿಲ್ಲ. ವಿಪಕ್ಷ ನಾಯಕ ಸ್ಥಾನದ ಆಯ್ಕೆ ವಿಳಂಬವಾಗುತ್ತಿಲ್ಲ, ಅಧಿವೇಶನ ಕರೆದ ಕೂಡಲೇ ಆಯ್ಕೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಧಾನಪರಿಷತ್ ಉಪ ಚುನಾವಣೆ | ಇಂದಿನಿಂದ ನಾಮಪತ್ರ ಸಲ್ಲಿಕೆ

ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮುಂಗಾರು ಮಳೆ ತಡವಾಗಿರುವುದರಿಂದ, ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಅಂತಾ ಶಬ್ದ ಬಳಸಲ್ಲ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಪ್ಲಾನ್ ಮಾಡಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮುಖ್ಯಮಂತ್ರಿಗಳು, ಸ್ಥಳೀಯ ಜನಪ್ರತಿನಿಧಿಗಳು ಆ ಟಾಸ್ಕ್ ಫೋರ್ಸ್​ನಲ್ಲಿರಬೇಕು, ಅವರಿಂದ ಸಹಕಾರ ಪಡೆಯಬೇಕು ಎಂದು ಕಾಂಗ್ರೆಸ್​ ಸರ್ಕಾರಕ್ಕೆ ಸಲಹೆ ನೀಡಿದರು.

​ಮುನ್ನೆಚ್ಚರಿಕೆಯಾಗಿ ಕೂಡಲೇ ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್‌ಡಿ‌ಆರ್‌ಎಫ್ ತಂಡಗಳನ್ನು ಚುರುಕುಗೊಳಸಬೇಕು. ಸ್ಥಳೀಯ ಮಟ್ಟದಲ್ಲಿ ಬಿಗಿ ಮಾಡಬೇಕು ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...