‘ನಾನು ನಾಯಕನಲ್ಲ, ಖಳನಾಯಕ’- ಸಿಎಂ ನಿತೀಶ್‌ ಮನೆ ಮುಂದೆ ಹಾಕಿದ್ದ ಬ್ಯಾನರ್ ಚಿತ್ರ ವೈರಲ್

Date:

ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ವಿಪಕ್ಷ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಚುನಾವಣಾ ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ, ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್ ಅವರ ನಿವಾಸದ ಮುಂದೆ ‘ನಾನು ನಾಯಕನಲ್ಲ, ಖಳನಾಯಕ’ ಎಂಬ ಬರಹವಿರುವ ಬೃಹತ್ ಬ್ಯಾನರ್ ಹಾಕಲಾಗಿದೆ. ಅದರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬ್ಯಾನರ್‌ಅನ್ನು ಆರ್‌ಜೆಡಿ ಹಾಕಿದೆ ಎಂದು ಹೇಳಲಾಗಿದೆ. ಬ್ಯಾನರ್‌ನಲ್ಲಿ ‘ನಾನು ನಾಯಕನಲ್ಲ, ಖಳನಾಯಕ’ ಎಂದು ಬರೆದಿರುವುದು ಮಾತ್ರವಲ್ಲದೆ, ‘ನಿತೀಶ್ ಕುಮಾರ್ ಮಹಿಳೆಯರನ್ನು ಅವಮಾನಿಸಿದ್ದಾರೆ. ನಿತೀಶ್ ಕುಮಾರ್ ಅವರು ಮಹಾತ್ಮ ಗಾಂಧಿ ಮತ್ತು ರಾಷ್ಟ್ರಗೀತೆಯನ್ನು ಅಪಮಾನಿಸಿದ್ದಾರೆ’ ಎಂದೂ ಬರೆಯಲಾಗಿದೆ.

ಗುರುವಾರ ‘ಪಾಟ್ಲಿಪುತ್ರ ಕ್ರೀಡಾ ಸಂಕೀರ್ಣ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿತೀಶ್ ಕುಮಾರ್ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ಸಮಯದಲ್ಲಿ ತಮ್ಮ ಪ್ರಧಾನ ಕಾರ್ಯದರ್ಶಿಯೊಂದಿಗೆ ನಗುತ್ತಾ ಮಾತನಾಡಿದ್ದರು. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿತೀಶ್‌ ಕುಮಾರ್ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಶುಕ್ರವಾರ ರಾಜ್ಯ ಅಧಿವೇಶನದಲ್ಲಿಯೂ ಚರ್ಚೆಯಾಗಿತ್ತು. ವಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿವೇಶನದಲ್ಲಿ ವಿಪಕ್ಷವಾದ ಆರ್‌ಜೆಡಿ ಶಾಸಕರು ಪೋಸ್ಟರ್ ಮತ್ತು ಬ್ಯಾನರ್‌ ಹಿಡಿದು ನಿತೀಶ್‌ ಕುಮಾರ್ ವರ್ತನೆಯನ್ನು ಖಂಡಿಸಿದ್ದರು. ‘ಭಾರತದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡುವುದವನ್ನು ಸಹಿಸಲಾಗುವುದಿಲ್ಲ’ ಎಂದು ಘೋಷಣೆ ಕೂಗಿದ್ದರು. ರಾಷ್ಟ್ರಗೀತೆಗೆ ಅವಮಾನಿಸಿದ್ದರ ಬಗ್ಗೆ ಚರ್ಚೆ ನಡೆಸಬೇಕೆಂದು ವಿಪಕ್ಷ ನಾಯಕ ತೇಜಸ್ವಿ ಯಾದವ್ ಒತ್ತಾಯಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...