ನಾನು ಸಿದ್ದರಾಮಯ್ಯರ ನೆರಳಲ್ಲಿ ಇಲ್ಲ, ದೇವೇಗೌಡರ ನೆರಳಲ್ಲಿ ಸಿಎಂ ಇದ್ದಾರೆ: ಕುಮಾರಸ್ವಾಮಿ

Date:

ನಾನು ರಾಜಕೀಯಕ್ಕೆ ಸಿದ್ದರಾಮಯ್ಯ ನೆರಳಲ್ಲಿ ಬಂದಿಲ್ಲ. ಸ್ವಂತ ದುಡಿಮೆ, ಕಾರ್ಯಕರ್ತರ ದುಡಿಮೆ‌ ಮೇಲೆ‌ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ಹಾಗೆ ನೋಡಿದರೆ ಸಿದ್ದರಾಮಯ್ಯ ಅವರೇ ನನ್ನ ಪಕ್ಷದ ಕಾರ್ಯಕರ್ತ. ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರ ನೆರಳಲ್ಲಿ ಸಿದ್ದರಾಮಯ್ಯ ಬಂದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಯನ್ನು ಯಾವುದೇ ಕಾರಣಕ್ಕೂ ಹೆದರಿಸಲು ಆಗಲ್ಲ. ನಾನು ಯಾರಿಗೂ ಹೆದರಲ್ಲ. ಸಿದ್ದರಾಮಯ್ಯನಂತಹ ಲಕ್ಷ ಜನ ಬರಲಿ ಹೆದರಲ್ಲ. ಜನರಿಗೆ ಮಾತ್ರ ಹೆದರುತ್ತೇನೆ” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆವ್ವ ಆಗಿದ್ದರೆ ಭಯ ಪಡಬೇಕು. ದೆವ್ವ ಅಲ್ಲ ಅಲ್ವಾ? ಹಾಗಿದ್ದರೆ ನಾನು ಯಾಕೆ ಭಯಪಡಲಿ? ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಕಾಲ‌ ಉತ್ತರ‌ ನೀಡುತ್ತೆ. ಐದು ವರ್ಷಗಳ ಕಾಲ ಸಿಎಂ ಆಗಿ‌ ಸಿದ್ದರಾಮಯ್ಯ ಇರುತ್ತಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ. ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಹತ್ರ ಇವರದ್ದು, ಯಾರದ್ದು ಏನು ನಡೆಯಲ್ಲ. ಎಫ್ಐಆರ್ ಹಾಕಿ ಬೆದರಿಸುವ ತಂತ್ರ ರೂಪಿಸಿದ್ದಾರೆ. ಬೆದರಿಕೆ ಅಲ್ದೆ ಇನ್ನೇನು ಇದೆ ಎಫ್ಐಆರ್​​​ನಲ್ಲಿ? ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತದೆ. ಕಾಲ ಪ್ರತಿಯೊಂದಕ್ಕೂ ಉತ್ತರ ನೀಡುತ್ತೆ” ಎಂದು ಮಾರ್ಮಿಕವಾಗಿ ನುಡಿದರು.

ಮುಡಾ‌ ವಿಚಾರ ಡೈವರ್ಟ್ ಮಾಡಲು ನಿಮ್ಮ ವಿರುದ್ಧ ಎಫ್ಐಆರ್ ಹಾಕಲಾಗಿದೆಯಾ ಎಂಬ ವಿಚಾರವಾಗಿ ಮಾತನಾಡಿ, “ಹೆಚ್ ​ಡಿ ಕುಮಾರಸ್ವಾಮಿ, ಪ್ರತಿಯೊಂದು ವಿಷಯ ಡೈವರ್ಟ್ ಮಾಡಲಿಕ್ಕೆ ನೋಡುತ್ತಿದ್ದಾರೆ. ಈ ಸರ್ಕಾರ ಎಲ್ಲವನ್ನು ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಇದು ಬಂಡ ಸರ್ಕಾರ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...