ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದೇ ನಾನು: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ

Date:

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದು ನಾನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ 4ನೇ ದಿನ ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರ, ಬೂಹಳ್ಳಿ ಮತ್ತು ಚನ್ನಪಟ್ಟಣ ಪಟ್ಟಣಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಚನ್ನಪಟ್ಟಣ ತಾಲ್ಲೂಕಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಮೀಸಲಾತಿ ಬಗ್ಗೆ ಮಾತನಾಡಿ, ಭದ್ರಾವತಿ ಮತ್ತು ತಾಲ್ಲೂಕು ಪಂಚಾಯತ್‌ಗಳಲ್ಲಿನ ಮಹಿಳಾ ಮೀಸಲಾತಿ ಜಾರಿಗೊಳಿಸಲು ನಾನು ಹೋರಾಟ ಮಾಡಿದ್ದು” ಎಂದರು.

“ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ್ದೇನೆ. ಮೋದಿ ಅವರು ಸಹ ಆ ಬಿಲ್‌ಗೆ ಒಪ್ಪಿಗೆ ನೀಡಿದ್ದಾರೆ, ನಾನು ನಿಮ್ಮ ಮುಂದೆ ನಿಂತು ಆ ಬಿಲ್ ಅನ್ನು ಒಪ್ಪಿಗೆಯಾಯಿತು. ಈ ಸರ್ಕಾರವನ್ನು ಸರ್ಕಾರ ಎಂದು ಕರೆಯಲು ಆಗುವುದಿಲ್ಲ. ನೀವು ನಿಮ್ಮ ಆತ್ಮವನ್ನು ಪ್ರಶ್ನಿಸಿ, ಇದನ್ನು ಸರ್ಕಾರ ಎಂದು ಕರೆಯುತ್ತೀರಾ” ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1957ರಲ್ಲಿ ನಾನು ಕಾಂಗ್ರೆಸ್ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದ್ದೆ. ನಿಮ್ಮ ಬೆಂಬಲದಿಂದ ನಾನು ವರದೇಗೌಡರನ್ನು ವಿಧಾನಸೌಧಕ್ಕೆ ಕರೆದೊಯ್ದೆ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರಿಗೆ ಐದು ಲಕ್ಷ ಮನೆಗಳನ್ನು ನಿರ್ಮಿಸುವ ಯೋಜನೆ ರೂಪಿಸಿದ್ದೆ. ನಾವು ಶಾಂತಿಯಾಗಿ ಬದುಕಬೇಕು ನಾನು ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿ ಆಗಿದ್ದೆ. ನಾವು ಎಲ್ಲರೂ ಮಾನವರು, ಹಿಂದೂ ಮತ್ತು ಮುಸ್ಲಿಂ ನಾವೆಲ್ಲರೂ ಒಂದೇ” ಎಂದರು.

ಈ ಸುದ್ದಿ ಓದಿದ್ದೀರಾ? ನ್ಯಾ. ಕುನ್ಹಾ ಆಯೋಗವು ಬಿಜೆಪಿ ಸರ್ಕಾರದ ಕೋವಿಡ್ ಭ್ರಷ್ಟಾಚಾರ ಬಿಚ್ಚಿಟ್ಟಿದೆ: ಸಿಎಂ ಸಿದ್ದರಾಮಯ್ಯ

“ಇಂಥ ನಿರ್ಲಕ್ಷ್ಯತೆ ಇರುವ ಸರ್ಕಾರವನ್ನು ಎಂದೂ ನೋಡಿಲ್ಲ. ಸರ್ಕಾರದ ನೀತಿಗಳನ್ನು ಜನರು ಪ್ರಶ್ನಿಸಬೇಕಾಗಿದೆ. ನಮ್ಮ ಭವಿಷ್ಯ ಅಪಾಯಕಾರಿ ಸ್ಥಿತಿಯಲ್ಲಿದೆ. ನಾವು ಜನರಿಗೆ ಸೇವೆ ಮಾಡುವ ಸರ್ಕಾರವನ್ನು ಆಯ್ಕೆ ಮಾಡಬೇಕು. ಕೊರತೆ ಇರುವ ಸರ್ಕಾರವನ್ನು ಅಲ್ಲ. ಚುನಾವಣೆ 13 ರಂದು ನಡೆಯುತ್ತದೆ, ಫಲಿತಾಂಶ 23 ರಂದು ಪ್ರಕಟವಾಗುತ್ತದೆ. ನಾನು ನಿಮ್ಮ ಜೊತೆಯಾಗಿ ಕೆಲಸಕ್ಕೆ ಮಾಡುತ್ತೇನೆ. ಮುಸ್ಲಿಂ ಮೊಹಲ್ಲಾದಲ್ಲಿ ನಿಮ್ಮೊಂದಿಗೆ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಲಪಡಿಸಲು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು. ಅವರು ಈ ಕ್ಷೇತ್ರಕ್ಕೆ ಹೊಸಬರೇನೂ ಅಲ್ಲ. ನಿಖಿಲ್ ಸಾರ್ವಜನಿಕ ಸೇವೆಯಲ್ಲಿ ಅನುಭವ ಹೊಂದಿರುವ ಪ್ರತಿಭಾವಂತ ಯುವನಾಯಕ. ಭಾರತದ ಭವಿಷ್ಯವನ್ನು ರೂಪಿಸಲು ಯುವಕರನ್ನು ರಾಜಕೀಯಕ್ಕೆ ಪ್ರೇರೇಪಿಸಲು ಅವರ ಗೆಲುವು ಅಗತ್ಯವಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...