ತುಂಗಭದ್ರಾ ಡ್ಯಾಮ್‌ ಘಟನೆ ಬಗ್ಗೆ ನಾನು ಯಾರನ್ನೂ ದೂಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Date:

ತುಂಗಭದ್ರಾ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ, ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡುವ ಮುನ್ನ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸುತ್ತಾರೆ. ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ” ಎಂದರು.

“ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿದ್ದರಾಮಯ್ಯ

“ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

“ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್‌ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನಃ ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನಃ ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ” ಎಂದರು.

ರಾಜ್ಯ ಸರ್ಕಾರ ವಿಫಲ: ಜೋಶಿ

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿ, ಜಲಾಶಯಗಳ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದರು. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ” ಎಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...