ನನಗೆ ಶ್ರೀರಾಮುಲು ಸಿಕ್ಕಿಲ್ಲ, ಪಕ್ಷಕ್ಕೆ ಬರುವಂತೆ ಅವರಿಗೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್‌ ಸ್ಪಷ್ಟನೆ

Date:

ನನಗೆ ಶ್ರೀರಾಮುಲು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ನಾನು ಅವರಿಗೆ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ಜನಾರ್ಧನ ರೆಡ್ಡಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಮುಲು ಅವರನ್ನು ನೀವು ಸಂಪರ್ಕ ಮಾಡಿದ್ದೀರಿ ಎನ್ನುವ ಜನಾರ್ಧನ ರೆಡ್ಡಿ ಅವರ ಆರೋಪದ ಬಗ್ಗೆ ಕೇಳಿದಾಗ, “ಆತ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟ, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ” ಎಂದು ಕಿಡಿಕಾರಿದರು.

“ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು 50 ಜನಕ್ಕೆ ಕೇಳಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀರಾಮುಲು ಈಗ ಕಾಂಗ್ರೆಸ್ ಪಕ್ಷಕ್ಕೆ ಬರಲು ಒಪ್ಪಿದರೆ ಎಂದು ಪ್ರಶ್ನಿಸಿದಾಗ, “ಇದರ ಬಗ್ಗೆ ನಾನೇಕೆ ಸುಮ್ಮನೆ ಯೋಚನೆ ಮಾಡಲಿ” ಎಂದರು. ಕೆಲವು ಸಚಿವರು ಶ್ರೀರಾಮುಲು ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ನನ್ನ ಮುಂದೆ ಈ ವಿಚಾರ ಪ್ರಸ್ತಾಪವಾಗಲಿ, ಆಗ ಚರ್ಚೆ ಮಾಡೋಣ” ಎಂದರು.

ಮೈಕ್ರೋ ಫೈನಾನ್ಸ್ ಹಾವಳಿಗಳ ಬಗ್ಗೆ ಕೇಳಿದಾಗ, “ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು, ಕಂದಾಯ, ಗೃಹ, ಕಾನೂನು ಸಚಿವರು ಸೇರಿ ಚರ್ಚೆ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ನಾನು ಹಿಂದೆ ಅಧ್ಯಯನ ಮಾಡಿದ್ದೆ. ಕಾನೂನಾತ್ಮಕವಾಗಿ ಯಾವ ಕ್ರಮ ತೆಗೆದುಕೊಳ್ಳಬಹುದು ಎಂದು ನಾವು ಚರ್ಚೆ ಮಾಡುತ್ತೇವೆ. ಸದ್ಯದಲ್ಲಿಯೇ ಸರ್ಕಾರದ ನಿರ್ಧಾರ ತಿಳಿಸಲಾಗುವುದು. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ” ಎಂದು ತಿಳಿಸಿದರು.

2026ಕ್ಕೆ ಫ್ರಾನ್ಸ್ ದೇಶದ ವೀಸಾ ಬೆಂಗಳೂರಿನಲ್ಲಿ ಲಭ್ಯ

“ಫ್ರಾನ್ಸ್ ದೇಶದ ಕಾನ್ಸುಲೇಟ್ ಕಚೇರಿಯ ಅಧಿಕಾರಿಗಳು ನನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು. ಕರ್ನಾಟಕದಿಂದ ಉತ್ತಮ ಹೂಡಿಕೆದಾರರು ಬರುತ್ತಿದ್ದಾರೆ. ನಮ್ಮ ಹೂಡಿಕೆದಾರರು ಸಹ ಸಂತಸಗೊಂಡಿದ್ದಾರೆ. 2026 ರ ವೇಳೆಗೆ ಬೆಂಗಳೂರಿನಲ್ಲಿ ಫ್ರಾನ್ಸ್ ದೇಶಕ್ಕೆ ವೀಸಾ ನೀಡುವ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದಿಂದಲೂ ಸಹಕಾರ ನೀಡುವುದಾಗಿ ತಿಳಿಸಿದ್ದೇವೆ. ಯಾವುದೇ ವಿಚಾರಕ್ಕೂ ಹಿಂಜರಿಕೆ ಮಾಡಿಕೊಳ್ಳಬೇಡಿ. ಕರ್ನಾಟಕದಲ್ಲಿ ಪ್ರಗತಿಪರವಾದ ಸರ್ಕಾರವಿದೆ. ನಿಮ್ಮ ಜೊತೆ ನಿಲ್ಲುತ್ತದೆ ಎಂದು ತಿಳಿಸಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...