ಅಲ್ಪಸಂಖ್ಯಾತರು ಸೇರಿ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

Date:

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಬೆಳಗಾವಿಯ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.

”ನನ್ನ ಮಾತಿನಲ್ಲಿ ತಪ್ಪೇನಿದೆ? ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಯ ಮಾತು ಖಂಡನೀಯ: ಬೊಮ್ಮಾಯಿ 

“ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ ಮತ್ತು ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್ ಮೈನಾರಿಟಿ ಕಾರ್ಪೊರೇಷನ್, ಮೈನಾರಿಟಿ ಕಮೀಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ‌ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶ. ಆದರೆ, ಇತರ ಎಲ್ಲ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿ ಮುಖ್ಯಮಂತ್ರಿಯ ಮಾತು ಖಂಡನೀಯ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...