‘ಇಂಡಿಯಾ’ ಒಕ್ಕೂಟದ ಸಂಸದರಿಂದ ಜುಲೈ 29-30 ರಂದು ಮಣಿಪುರ ಭೇಟಿ

Date:

ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ ವಿಪಕ್ಷ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ಸಂಸತ್ತಿನ 20 ಕ್ಕೂ ಹೆಚ್ಚು ವಿರೋಧ ಪಕ್ಷದ ಸದಸ್ಯರ ನಿಯೋಗವು ಈ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದು, ರಾಜ್ಯದಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಲಿದೆ ಎಂದು ಲೋಕಸಭೆಯ ಕಾಂಗ್ರೆಸ್ ಉಪ ನಾಯಕ ಮಾಣಿಕಂ ಟ್ಯಾಗೋರ್ ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ವಿರೋಧ ಪಕ್ಷದ ನಾಯಕರು ಕೆಲವು ದಿನಗಳಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ ಭದ್ರತೆಯ ಕಾರಣದಿಂದ ಅನುಮತಿ ನಿರಾಕರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗಷ್ಟೆ ಮಣಿಪುರದ ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದರು. 26 ಪಕ್ಷಗಳ ಇಂಡಿಯಾ ಮೈತ್ರಿಕೂಟದ ಹಲವು ಸಂಸದರು ನಿಯೋಗದಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಕಳಂಕ ತರುತ್ತಿರುವ ಪ್ರಧಾನಿ ಮೋದಿ: ಖರ್ಗೆ

ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡದೆ ಹೊರಗೆ ರಾಜಕೀಯ ಭಾಷಣ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಇತಿಹಾಸದಲ್ಲಿ ದೇಶ ಇದಕ್ಕಿಂತ ಕರಾಳ ಅವಧಿಯನ್ನು ಕಂಡಿಲ್ಲ. ಮಣಿಪುರದ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ಅಸಡ್ಡೆಯು ಮಾನವೀಯತೆಯ ಮೇಲಿನ ಕಳಂಕವಾಗಿದೆ. ಜನರು ಈಗ ಜಾಗೃತರಾಗಿದ್ದಾರೆ. ಈ ರೀತಿಯ ರಾಜಕೀಯದ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ಖರ್ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? 5 ವರ್ಷಗಳಿಂದ ಹೊಸ ಐಐಟಿ-ಐಐಎಂ ನಿರ್ಮಿಸಿಲ್ಲ ಎಂದ ಕೇಂದ್ರ: ಅಮೆರಿಕದಲ್ಲಿ ಸುಳ್ಳು ಹೇಳಿದ ಪ್ರಧಾನಿ!

“ಸಂಸತ್ತಿನ ಅಧಿವೇಶನ ನಡೆಯುತ್ತಿದ್ದು, ಪ್ರಧಾನಿಯವರು ಸದನದಲ್ಲಿ ಮಾತನಾಡುವ ಬದಲು ಅಲ್ಲೊಂದು ಇಲ್ಲೊಂದು ಭಾಷಣ ಮಾಡುತ್ತಾ ಪ್ರಜಾಪ್ರಭುತ್ವಕ್ಕೆ ಕಳಂಕ ತರುತ್ತಿದ್ದಾರೆ. ವಿರೋಧ ಪಕ್ಷಗಳ ಹೆಸರು ಹೇಳಿದರೆ ಮೋದಿ ಸರ್ಕಾರದ ಕುಕೃತ್ಯಗಳನ್ನು ಅಳಿಸಲು ಸಾಧ್ಯವಿಲ್ಲ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. 

ಕಳೆದ 85 ದಿನಗಳಿಂದ ಹಿಂಸಾಚಾರ ನಡೆಯುತ್ತಿರುವ ಈಶಾನ್ಯ ರಾಜ್ಯದ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವುದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಕಲಾಪ ನಡೆಯುತ್ತಿಲ್ಲ. ಸದನದಲ್ಲಿ ಪ್ರಧಾನಿಯವರು ಹೇಳಿಕೆ ನೀಡಲು ಹಾಗೂ ಮಣಿಪುರದ ಬಗ್ಗೆ ಚರ್ಚೆಗೆ ವಿಪಕ್ಷಗಳು ಒತ್ತಾಯಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...