ನಾನು ಲಿಂಗಾಯತ ನಾಯಕ ಎನ್ನುವ ಕಾರಣಕ್ಕೆ ಕಡೆಗಣಿಸಿದರು: ಜಗದೀಶ್ ಶೆಟ್ಟರ್

Date:

  • ‘ಬಿಎಸ್‌ವೈ ಅವರನ್ನು ಬಿಟ್ಟರೆ ನಾನೇ ಲಿಂಗಾಯತ ಹಿರಿಯ ನಾಯಕ
  • ವಿಧಾನಸಭೆಗೆ ಹೋದರೆ ಅಧಿಕಾರ ಕೇಳುತ್ತೇನೆಂದು ಭಾವಿಸಿದ್ದರು

ಬಿಜೆಪಿಯವರು ನನ್ನನ್ನು ಚಿಕ್ಕ ಬಾಲಕನಂತೆ ನಡೆಸಿಕೊಂಡಿದ್ದಾರೆ. ಲಿಂಗಾಯತ ನಾಯಕರಲ್ಲಿ ನಾನು ಹಿರಿಯ, ಈ ಉದ್ದೇಶದಿಂದಲೇ ಕಡೆಗಣಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಧಾನ ವ್ಯಕ್ತಪಡಿಸಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಅವರು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ ಎಸ್‌ ಯಡಿಯೂರಪ್ಪ ಅವರನ್ನು ಬಿಟ್ಟರೆ ಲಿಂಗಾಯತ ಸಮುದಾಯದಲ್ಲಿ ನಾನೇ ಹಿರಿಯ ನಾಯಕ. ನಾನು ವಿಧಾನಸಭೆಗೆ ಹೋದರೆ ಅಧಿಕಾರ ಕೇಳುತ್ತೇನೆ ಎಂದು ಭಾವಿಸಿದ್ದರು. ಆದ್ದರಿಂದಲೇ ವ್ಯವಸ್ಥಿತವಾಗಿ ನನ್ನನ್ನು ಪಕ್ಷದಿಂದ ಹೊರಹಾಕಿದ್ದಾರೆ” ಎಂದು ಬಿಜೆಪಿ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನೀಡಿದ ಎಲ್ಲ ಜವಾಬ್ದಾರಿಗಳನ್ನು ನಾನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಕಳೆದ ಆರು ತಿಂಗಳಿಂದ ನನ್ನನ್ನು ಕಡೆಗಣಿಸಲಾಗಿದೆ. ನನಗೆ ಬಿಜೆಪಿ ಗೌರವ ನೀಡಲಿಲ್ಲ” ಎಂದು ಹೇಳಿದರು.

“ಕಾಂಗ್ರೆಸ್‌ನ ತತ್ವ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಸೇರಿದ್ದೇನೆ. ಜನರ ಅಭಿಪ್ರಾಯ ಪಡೆದು ಈ ನಿರ್ಧಾರಕ್ಕೆ ಬಂದಿದ್ದೇನೆ. ಹುಬ್ಬಳಿ ಜನರಿಗೆ ನನ್ನ ಮೇಲೆ ಪ್ರೀತಿ ಇದೆ. ಅವರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ” ಎಂದು ಎಂದರು.

“ರಾಜ್ಯದಲ್ಲಿ ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿರುವೆ. ಆದರೆ, ನನ್ನ ಮನೆಯಿಂದಲೇ ನನ್ನನ್ನು ಹೊರದೂಡಲಾಗಿದೆ. ಬಿಜೆಪಿ ಕೆಲವೇ ಕೆಲವು ನಾಯಕರ ಹಿಡಿತದಲ್ಲಿದೆ. ಅವರು ತಮ್ಮ ಹಿತಾಸಕ್ತಿಗೆ ಕೆಲಸ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ

ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, “ನಾನು ಅಧಿಕಾರ ಕೇಳಲಿಲ್ಲ. ಕೇವಲ ಆರು ತಿಂಗಳ ಕಾಲ ಶಾಸಕನಾಗಿ ಆಮೇಲೆ ರಾಜಕೀಯ ನಿವೃತ್ತಿ ಘೋಷಿಸುವೆ ಎಂದಿದ್ದೆ. ಆದರೆ, ಅವರು ಅದಕ್ಕೂ ಅವಕಾಶ ನೀಡಲಿಲ್ಲ” ಎಂದು ನೊಂದು ನುಡಿದರು.

“ಈ ಬೆಳವಣಿಗೆ ದೆಹಲಿ ನಾಯಕರ ಗಮನಕ್ಕೆ ಬರುತ್ತಿಲ್ಲ. ನಾನು ಪ್ರಧಾನಿ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿದರು.

“ಬಿಜೆಪಿ ನಾಯಕರು ಹಿರಿಯ ನಾಯಕರನ್ನು ನಡೆಸಿಕೊಳ್ಳುವ ರೀತಿ ಸರಿ ಇಲ್ಲ. ನಾನು ಕಾಂಗ್ರೆಸ್ ಸೇರಿದ್ದೇನೆ. ಇನ್ನು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಇದು ಹೊಸ ಅಧ್ಯಾಯ, ನನಗೂ ಹೊಸ ಅದ್ಯಾಯ” ಎಂದರು.

“ನನಗೆ ಈ ಬಾರಿ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆ ಇತ್ತು. ಅಧಿಕಾರದ ಆಸೆಗೆ ನಾನು ರಾಜಕಾರಣ ಮಾಡಿಕೊಂಡು ಬಂದಿಲ್ಲ. ಪಕ್ಷದಲ್ಲಿ ಹಿರಿಯರನ್ನು ನಡೆಸಿಕೊಳ್ಳುವ ರೀತಿ ಇದೆನಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...