12 ಸಲ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿಗೆ ಸಿಎಂ ಆಗಿದ್ದೇನೆ : ಮೌಢ್ಯದ ಬಗ್ಗೆ ಸಿದ್ದರಾಮಯ್ಯ

Date:

  • ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನದಲ್ಲಿ ಮುಖ್ಯಮಂತ್ರಿ
  • ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚಳ : ಸಿಎಂ ಸಿದ್ದರಾಮಯ್ಯ ವಿಷಾದ

‘ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ’ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಸಲ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದೇನೆ. ಇಂತಹ ಮೌಢ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲೇ ಮೌಢ್ಯ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಎಲ್ಲವೂ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್‌ ಅಚ್ಚರಿಯ ಹೇಳಿಕೆ

ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನ‌ಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಶಾಸಕ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಕೊಂಡಜ್ಜಿ ಮೋಹನ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...