ಸಿನಿಮಾ ಇಲ್ಲದೇ ನಾನು ಬದುಕುವೆ, ಚಿತ್ರರಂಗದವರು ಬೆಳೆಯಲು ಸರ್ಕಾರ-ಜನ ಬೇಕು: ಡಿ.ಕೆ.ಶಿವಕುಮಾರ್

Date:

ಸಿನಿಮಾ ಕ್ಷೇತ್ರದವರು ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಂಗಳವಾರ ಮಾಧ್ಯಮಗಳು ” ಫಿಲ್ಮ ಫೆಸ್ಟಿವಲ್‌ಗೆ ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ ಎಂದು. ಆದರೆ ಎಚ್ಚರಿಕೆ ಕೊಡಬೇಕಲ್ಲವೇ” ಎಂದು ಪ್ರಶ್ನಿಸಿದರು.

ನಟ್ಟು- ಬೋಲ್ಟ್ ವಿಚಾರವಾಗಿ ವಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ಕೇಳಿದಾಗ, “ಟೀಕೆ ಮಾಡಲಿ ಎಂದು ನಾನು ಹೇಳಿಕೆ ನೀಡಿದ್ದು. ನಾನು ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ಸಹಾಯ ತೆಗೆದುಕೊಂಡವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಯಾರಿಗಾಗಿ ಮಾಡಿರುವುದು. ಚಿತ್ರರಂಗ ಬೆಳೆಯಲಿ ಎಂದು. ಅವರ ಕ್ಷೇತ್ರದ ಬಗ್ಗೆ ಅವರೇ ಪ್ರಚಾರ ಮಾಡಿಕೊಳ್ಳದೇ ಇದ್ದರೆ ನಾವು ಬೆಳಗ್ಗೆ ಸಂಜೆ ಪ್ರಚಾರ ಮಾಡಿಕೊಳ್ಳಲು ಆಗುತ್ತದೆಯೇ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಾಕಿ ಬಿಲ್ ಪಾವತಿ

“ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಹೇಳಿದರು.

ಖರ್ಗೆ ಅವರನ್ನು ಭೇಟಿ ಮಾಡದೆ ಬಿಜೆಪಿ ಕಚೇರಿಗೆ ಹೋಗಲೇ?

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ವಿಚಾರ ಕೇಳಿದಾಗ, “ನಾನು ಖರ್ಗೆ ಅವರನ್ನು ಭೇಟಿ ಮಾಡದೇ ಬಿಜೆಪಿ ಕಚೇರಿಗೆ ಭೇಟಿ ನೀಡಲೇ?. ಅವರು ರಾಷ್ಟ್ರದ ಅಧ್ಯಕ್ಷರು, ನಾನು ರಾಜ್ಯದ ಅಧ್ಯಕ್ಷ. ಅವರು ನಮ್ಮ ರಾಜ್ಯಕ್ಕೆ ಬಂದಾಗ ಹೋಗಿ ಭೇಟಿ ಮಾಡಿ ಗೌರವ ನೀಡುವುದು ನಮ್ಮ ಕೆಲಸ. ಪಕ್ಷದ ವಿಚಾರಗಳು, ನೂತನ ಕಾಂಗ್ರೆಸ್ ಕಚೇರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು, ಈ ತಿಂಗಳಿನಲ್ಲಿಯೇ ದಿನಾಂಕ ನೀಡಿ ಎಂದು ಮನವಿ ಮಾಡಲು ಹೋಗಿದ್ದೆ” ಎಂದು ತಿಳಿಸಿದರು.

ಬಿಬಿಎಂಪಿ ಸರ್ಕಾರಿ ಕಚೇರಿಗಳಿಗೆ ತೆರಿಗೆ ಬಾಕಿ ಬಗ್ಗೆ ನೋಟಿಸ್ ನೀಡಿರುವ ಬಗ್ಗೆ, “ಹೌದು ಹಣ ಸಂಗ್ರಹ ಮಾಡಬೇಕಲ್ಲವೇ. ಬಿಬಿಎಂಪಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಸರ್ಕಾರಿ ಕಚೇರಿಯಾದರೂ ಒಂದಷ್ಟು ಬಿಲ್ ಗಳನ್ನು ಕಟ್ಟಲೇ ಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರೇ ಬಿಲ್ ಗಳನ್ನು ಕಟ್ಟಲೇಬೇಕು. ಈ ವಿಚಾರ ಕಳೆದ 20- 30 ವರ್ಷಗಳಿಂದ ನಡೆಯುತ್ತಿದೆ” ಎಂದರು.

ರಾಜಭವನ, ವಿಧಾನಸೌಧಗಳು ಈ ವ್ಯಾಪ್ತಿಗೆ ಬರುತ್ತವೆಯೇ ಎಂದಾಗ, “ಹೌದು ಎಲ್ಲರೂ ತೆರಿಗೆ ಪಾವತಿ ಮಾಡಲೇಬೇಕು” ಎಂದರು. ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಬಾಕಿ ರೂ.150 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಮರು ಪ್ರಶ್ನಿಸಿದಾಗ, “ಎಲ್ಲವನ್ನು ಸಂಗ್ರಹ ಮಾಡಲಾಗುವುದು. ಯಾವುದಕ್ಕೂ ನಾವು ವಿನಾಯಿತಿ ನೀಡಬಾರದು. ಎಲ್ಲರೂ ತೆರಿಗೆ ಕಟ್ಟಲೇಬೇಕು. ವಿದ್ಯುತ್ ಪೂರೈಕೆದಾರರಿಗೆ ನಾವು ಬಿಲ್ ನೀಡದೇ ಇದ್ದರೇ ಶೇ 18 ರಷ್ಟು ಬಡ್ಡಿ ತೆರಬೇಕಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...