ದೇಶದಲ್ಲಿ ಬಿಜೆಪಿಗರು ಒಂದೇ ಒಂದು ಅಣೆಕಟ್ಟು ಕಟ್ಟಿದ್ದು ತೋರಿಸಿದರೆ, ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುವೆ: ಸಿಎಂ ಸವಾಲು

Date:

ದೇಶದಲ್ಲಿ ಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ-ನೀರಾವರಿಗೆ ನೆರವು ನೀಡಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

“ಕಾಂಗ್ರೆಸ್ ಈ ದೇಶಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತದೆ. ಇಡೀ ದೇಶದಲ್ಲಿರುವ ಅಣೆಕಟ್ಟುಗಳನ್ನು ಕಟ್ಟಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ನೆಪಕ್ಕಾದರೂ ಒಂದೂ ಅಣೆಕಟ್ಟು ಕಟ್ಟಿಸಲಿಲ್ಲ. ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1925 ರಲ್ಲೇ ಆರ್‌ಎಸ್‌ಎಸ್‌ ಹುಟ್ಟಿದರೂ ಅಪ್ಪಿ ತಪ್ಪಿಯೂ ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.‌ ಭಾರತೀಯರನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಿದ್ದು, ಇದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ, ಜೈಲು ಸೇರಿದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈಗ ಭಾರತದ ಜೀವಾಳವಾದ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಆರಂಭಿಸಿದೆ” ಎಂದು ಹೇಳಿದರು.

“ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಿಜೆಪಿಯ ಸಂಸದ ಅನಂತಕುಮಾರ್ ಹೆಗಡೆ ನೇರವಾಗಿ ಹೇಳುತ್ತಾರೆ. ಇದನ್ನು ಬಿಜೆಪಿಯ ಯಾರೊಬ್ಬರೂ ವಿರೋಧಿಸಲಿಲ್ಲ. ಇದರಿಂದ ಅವರ ಸಂವಿಧಾನ ವಿರೋಧಿ ನಿಲುವು ಸ್ಪಷ್ಟವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ದುರ್ಬಲಗೊಳಿಸಲು ಹವಣಿಸುತ್ತಿರುವವರಿಗೆ ಸಂವಿಧಾನ ಜಾಗೃತಿ ಜಾಥಾ ಉತ್ತರ: ಸಿಎಂ ಸಿದ್ದರಾಮಯ್ಯ

“ಅಚ್ಛೆ ದಿನ್ ಆಯೇಗಾ ಎಂದ ನರೇಂದ್ರ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ್” ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ”ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಬೆಲೆ ಇಳಿಕೆ ಮಾಡಿದಿರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾಷಣ ಮಾಡಿದ ಮೋದಿಯವರೇ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಲ್ಲಿವೆ 20 ಕೋಟಿ ಉದ್ಯೋಗ ತೋರಿಸಿ” ಎಂದು ಸವಾಲು ಹಾಕಿದರು.

“ರಾಜ್ಯದಲ್ಲಿ ಬರಗಾಲ ಬಂದಿದೆ. ಬಿಜೆಪಿ ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಒಂದು ರುಪಾಯಿ ಬರ ಪರಿಹಾರವನ್ನೂ ತರಲಿಲ್ಲ. ರೈಲು ಬಿಡುವುದರಲ್ಲಿ ಮಾತ್ರ ಪ್ರತಾಪ ತೋರಿಸುವ ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಸಲಿಲ್ಲ ಏಕೆ” ಎಂದು ಪ್ರಶ್ನಿಸಿದರು.

ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಕ್ಕೆ ಶಾಸಕರಾದ ಪೊನ್ನಣ್ಣ ಮತ್ತು ಮಂಥರ್ ಗೌಡ ಹಾಗೂ ಇಡೀ ಜಿಲ್ಲೆಯ ಜನತೆಗೆ ಸರ್ಕಾರ ಮತ್ತು ಪಕ್ಷದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...