ನಿಖಿಲ್ ಅಭ್ಯರ್ಥಿಯಾದರೆ ನನ್ನ ಬೆಂಬಲ, ನೀವೇ ಮುಂದೆ ನಿಂತು ಉಪಚುನಾವಣೆ ನಡೆಸಿ: ಹೆಚ್‌ಡಿಕೆಗೆ ಸಿಪಿವೈ ಮನವಿ

Date:

ಚನ್ನಪಟ್ಟಣ ಉಪಚುನಾವಣೆಯಲ್ಲಿ​​ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ‌ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹೆಚ್ ​​ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್​​ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ, ಅಭ್ಯರ್ಥಿ ಆಯ್ಕೆ ಸಂಬಂಧ ಒಂದು ವಾರದಲ್ಲಿ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಮನವಿ ಮಾಡಿದ್ದಾರೆ.

ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಅಭ್ಯರ್ಥಿ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ನೀವೇ ಮುಂದೆ ನಿಂತು ಉಪಚುನಾವಣೆಯನ್ನು​ ನಡೆಸಬೇಕು ಎಂದು ಕುಮಾರಸ್ವಾಮಿ ಬಳಿ ಯೋಗೇಶ್ವರ್ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ. ಇದೇ ವೇಳೆ, ಈ ವಾರ ಬೆಂಗಳೂರಿಗೆ ಬರುತ್ತೇನೆ. ಮತ್ತೊಮ್ಮೆ ಚರ್ಚಿಸಿ ನಿರ್ಧರಿಸೋಣ ಎಂದು ಕುಮಾರಸ್ವಾಮಿ ಉತ್ತರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಮತ್ತೊಂದೆಡೆ, ಕುಮಾರಸ್ವಾಮಿ ಕರ್ಮಭೂಮಿಯಲ್ಲಿ ಸೋಲಿನ ರುಚಿ ತೋರಿಸಲು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಪಣ ತೊಟ್ಟಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ. ಡಿಕೆ ಸಹೋದರರ ವಿರುದ್ಧ ಚನ್ನಪಟ್ಟಣ ಮಿನಿ ಸಮರದಲ್ಲಿ ಗೆಲ್ಲಲು ಪುತ್ರ ನಿಖಿಲ್‌ ಅವರಿಗೆ ಕುಮಾರಸ್ವಾಮಿ ಜವಾಬ್ದಾರಿ ವಹಿಸಲಿದ್ದಾರೆ ಎನ್ನಲಾಗಿದೆ.

ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಬದಲು ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಎನ್​​ಡಿಎ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡಲು ನಿಖಿಲ್ ಮುಂದಾಗಿದ್ದಾರೆ ಎನ್ನಲಾಗಿದೆ.

ಡಿ ಕೆ ಶಿವಕುಮಾರ್ ಈಗಾಗಲೆ ಚನ್ನಪಟ್ಟಣ ಉಪ ಸಮರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ನಿರಂತರವಾಗಿ ಪ್ರವಾಸ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಭಾನುವಾರದಿಂದ ನಿಖಿಲ್ ಕೂಡ ಚನ್ನಪಟ್ಟಣ ಪ್ರವಾಸ ಆರಂಭಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ರಾಮನಗರ ಜಿಲ್ಲೆಯಲ್ಲಿ ಇದ್ದ ಒಂದು ಕ್ಷೇತ್ರವನ್ನು ಜೆಡಿಎಸ್ ಕಳೆದುಕೊಳ್ಳಬೇಕಾಗುತ್ತದೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದರೂ ಇಡೀ ಜಿಲ್ಲೆಯ ಹಿಡಿತ ಕಳೆದುಕೊಳ್ಳಬೇಕಾಗುತ್ತದೆ. ಕುಮಾರಸ್ವಾಮಿಯ ಕರ್ಮಭೂಮಿಯಲ್ಲಿ ಸೋಲು ಉಂಟಾದರೆ ಕಾರ್ಯಕರ್ತರು ಚದುರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲ್ಲುವ ಅನಿವಾರ್ಯತೆ ಎದುರಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...