‘5 ವರ್ಷ ನಾನೇ ಸಿಎಂ’ ಎಂದ ಸಿದ್ದರಾಮಯ್ಯ ಅವರಿಗೆ ಶುಭಕೋರುವೆ: ಡಿ ಕೆ ಶಿವಕುಮಾರ್

Date:

ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ) ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ” ಎಂದರು.

ಎರಡೂವರೆ ವರ್ಷಗಳಿಂದ ಡಿನ್ನರ್ ಮೀಟಿಂಗ್ ಆಗುತ್ತಲೇ ಇವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, “ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ” ಎಂದು ತಿಳಿಸಿದರು.

“ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕ ನಾನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಹೇಳಿದರು.

ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, “ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ” ಎಂದರು.

“ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...