ಸಚಿವರು ಕರೆದಿದ್ದ ಸಭೆಗೆ ಗೈರಾದ ಐಎಎಸ್ ಅಧಿಕಾರಿಗಳು ಅಮಾನತು

Date:

ಮಹಾರಾಷ್ಟ್ರ ಸಚಿವರು ಕರೆದಿದ್ದ ಪ್ರಮುಖ ಸಭೆಗಳಿಗೆ ಹಾಜರಾಗದ ಕಾರಣ ಐಎಎಸ್‌ ಅಧಿಕಾರಿಗಳಾದ ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಎಂಪಿಸಿಬಿ) ಜಂಟಿ ನಿರ್ದೇಶಕರು ಮತ್ತು ಸದಸ್ಯ ನಿರ್ದೇಶಕರನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಸಚಿವರಿಗೆ ನಿರ್ಣಾಯಕ ವಿಷಯಗಳ ಕುರಿತು ಮಾಹಿತಿ ಪಡೆಯಲು ರಾಜ್ಯ ಪರಿಸರ ಸಚಿವೆ ಪಂಕಜಾ ಮುಂಡೆ ಅವರು ಫೆಬ್ರವರಿ 26ರಂದು ಸಭೆ ಕರೆದಿದ್ದರು. ಚಂದ್ರಾಪುರ ಜಿಲ್ಲೆಯಲ್ಲಿ ಮಾಲಿನ್ಯದ ಕುರಿತು ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಆ ಸಭೆಗೆ ಎಂಪಿಸಿಬಿ ಸದಸ್ಯ ಕಾರ್ಯದರ್ಶಿ ಎಂ. ದೇವೇಂದರ್ ಸಿಂಗ್ ಮತ್ತು ಎಂಪಿಸಿಬಿ ಜಂಟಿ ನಿರ್ದೇಶಕ ಸತೀಶ್ ಪಡ್ವಾಲ್ ಹಾಜರಾಗಿರಲಿಲ್ಲ. ಪರಿಣಾಮ, ಸಚಿವರು ಮಾಹಿತಿ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಹೇಳಲಾಗಿದೆ.

ಸಭೆಗೆ ಹಾಜರಾಗದ ಅಧಿಕಾರಿಗಳು, ತಾವು ಸಭೆಗೆ ಹಾಜರಾಗದ ಕಾರಣ ವಿವರವಾದ ಬ್ರೀಫಿಂಗ್ ನೀಡಲು ಸಾಧ್ಯವಾಗುವುದಿಲ್ಲವೆಂದು ಸಂದೇಶ ಕಳಿಸಿದ್ದರು ಎಂದು ಸಚಿವೆ ಪಂಕಜಾ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳ ಈ ಅವಿಧೇಯತೆಯು ಸಾರ್ವಜನಿಕರಿಗೆ ಉತ್ತರಿಸುವ ಸಚಿವರ ಸಾಮರ್ಥ್ಯಕ್ಕೆ ಅಡ್ಡಿಯಾಗುತ್ತದೆ ಎಂದು ಅವರು ಸದನದಲ್ಲಿ ಹೇಳಿದ್ದಾರೆ.

ಸಚಿವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ ಹಂಗಾಮಿ ಸ್ಪೀಕರ್ ದಿಲೀಪ್ ಲಾಂಡೆ, ಅಧಿಕಾರಿಯ ಗೈರುಹಾಜರಿಯನ್ನು ‘ತೀವ್ರ ನಿರ್ಲಕ್ಷ್ಯ’ ಮತ್ತು ‘ಶಾಸಕಾಂಗಕ್ಕೆ ಮಾಡಿದ ಅವಮಾನ’ ಎಂದು ಬಣ್ಣಿಸಿದ್ದಾರೆ. ಸರ್ಕಾರವು ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಅವರ ನಿರ್ದೇಶನ ಬಂದ 24 ಗಂಟೆಗಳ ಒಳಗೆ, ರಾಜ್ಯ ಸರ್ಕಾರವು 1969ರ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ ಇಬ್ಬರೂ ಅಧಿಕಾರಿಗಳನ್ನು ಅಮಾನತು ಮಾಡಿ, ಆದೇಶ ಹೊರಡಿಸಿದೆ. ಈ ವಿಷಯವು ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಲೇಖನ ಓದಿದ್ದೀರಾ?: ಎಪ್‌ಸ್ಟೀನ್‌ ಪ್ರಕರಣ: ಟ್ರಂಪ್ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕಡತಗಳೇ ನಾಪತ್ತೆ

ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್ ಅವರು, ಅಧಿಕಾರಿಗಳ ನಡವಳಿಕೆಯನ್ನು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಮತ್ತು ‘ಸಂವಿಧಾನಕ್ಕೆ ಮಾಡಿದ ಅವಮಾನ’ ಎಂದು ಟೀಕಿಸಿದ್ದಾರೆ. ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳಿಗೆ ತಾವು ಜವಾಬ್ದಾರರು ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

MPCB ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗುವುದು. ಈ ಅವಧಿಯಲ್ಲಿ, ಅವರ ಪ್ರಧಾನ ಕಚೇರಿ ಮುಂಬೈನಲ್ಲಿಯೇ ಇರುತ್ತದೆ ಮತ್ತು ಅವರು ಅನುಮತಿಯಿಲ್ಲದೆ ನಗರವನ್ನು ಬಿಡಲು ಅಥವಾ ಬೇರೆ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...