ಇದ್ರೀಷ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ| ಆರೋಪಿ ಪುನೀತ್ ಕೆರೆಹಳ್ಳಿ ಪೊಲೀಸ್‌ ವಶಕ್ಕೆ

Date:

  • 7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ
  • ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು

ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿಕನಕಪುರ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಳೆದ ಮಾರ್ಚ್‌ 31 ರಂದು ಕನಕಪುರದ ಸಾತನೂರು ಬಳಿ ದನಗಳನ್ನು ಸಾಗಸುತ್ತಿದ್ದ ಇದ್ರೀಶ್‌ ಪಾಷಾ ಅವರನ್ನು ಅಡ್ಡಗಟ್ಟಿದ್ದ ಪಿನೀತ್‌ ಕೆರೆಹಳ್ಳಿ ಮತ್ತು ತಂಡ ಪಾಷಾ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಯ ವಿಡಿಯೋವನ್ನು ಆರೋಪಿಗಳೇ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಏಪ್ರಿಲ್‌ 1 ರಂದು ವಾಹನ ತಡೆಯೊಡಿದ್ದ ಕೂಗಳತೆ ದೂರದಲ್ಲಿ ಇದ್ರೀಶ್‌ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಇದ್ರೀಶ್‌ ಪೋಷಕರು ಪುನೀತ್‌ ಮತ್ತು ಸಹಚರರ ಮೇಲೆ ಸಾತನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 341, 504, 506, 324, 302, 304 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಅವರನ್ನು ಮೂರ್ನಾಲ್ಕು ದಿನಗಳ ನಂತರ, ಸಾತನೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದರು.

ಪ್ರಕರಣದ ಸಂಬಂಧ ಆರೋಪಿಗಳನ್ನು ವಿಚಾರಣೆಗೆ ಒಳಪಸುವ ಉದ್ದೇಶದಿಂದ ಐವರನ್ನೂ ತಮ್ಮ ವಶಕ್ಕೆ ನೀಡುವಂತೆ ಸಾತನೂರು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಪೊಲೀಸರು ಮನವಿ ಪುರಸ್ಕರಿಸಿದ ಸುರೇಶ ಅಪ್ಪಣ್ಣ ಸವದಿ ನೇತೃತ್ವದ ನ್ಯಾಯಾಲಯವು ಐವರು ಆರೋಪಿಗಳನ್ನು 7 ದಿನಗಳ ಕಾಲ ಸಾತನೂರು ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...