ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿ.ಕೆ. ಶಿವಕುಮಾರ್

Date:

“ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,”ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು ವಿಫಲವಾದ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ” ಎಂದು ತಿಳಿಸಿದರು.

“ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಸಚಿವರು, ಶಾಸಕರು, ಸಂಸದರು ಇದೇ ಮೊದಲ ಬಾರಿಗೆ ಇಂತಹ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸಿದ್ದರಾಮಯ್ಯ ಅವರು ಕುಂಕುಮ ತಿರಸ್ಕಾರ ಮಾಡಿದ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದಾಗ, “ನನಗೆ ಸುಗಂಧ ರಾಜ ಹೂವು ಅಲರ್ಜಿ ಇದೆ. ಅದೇ ರೀತಿ ಬೇರೆಯವರಿಗೆ ಬೇರೆ, ಬೇರೆ ರೀತಿಯ ಅಲರ್ಜಿ ಇರುತ್ತದೆ. ಸಿದ್ದರಾಮಯ್ಯ ಕುಂಕುಮ ಇಟ್ಟುಕೊಳ್ಳುವುದಿಲ್ಲ ಎಂದು ಯಾರು ಹೇಳಿದರು? ಮೊನ್ನೆಯಷ್ಟೇ ಅವರು ಕುಂಕುಮ ಇಟ್ಟುಕೊಂಡಿದ್ದರು. ಮಹಿಳೆಯರಂತೆ ಅಗಲವಾಗಿ ಕುಂಕುಮ ಇಟ್ಟುಕೊಳ್ಳಲು ಆಗುತ್ತದೆಯೇ” ಎಂದು ಪ್ರಶ್ನಿಸಿದರು.

ಜಾತಿ ಕಾರಣಕ್ಕೆ ಸ್ವಾಮೀಜಿಗಳಿಗೆ ಗರ್ಭಗುಡಿಗೆ ಪ್ರವೇಶ ನಿರಾಕರಣೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಸಾಮಾನ್ಯವಾಗಿ ದೇವಾಲಯಗಳನ್ನು ಬೆಳಗ್ಗೆ ಮತ್ತು ಸಂಜೆ ವೇಳೆ ಸ್ವಚ್ಛ ಮಾಡುವುದು ಸಹಜ. ಈ ಪ್ರಕರಣದಲ್ಲಿ ಏನು ಉದ್ದೇಶ ಇದೆ ಎಂದು ಜಿಲ್ಲಾ ಸಚಿವರು, ಮುಜರಾಯಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ನಮ್ಮಲ್ಲಿ ಇಂತಹ ಅಸ್ಪೃಶ್ಯತೆ ಇಲ್ಲ. ನಾವೆಲ್ಲರೂ ಒಂದೇ. ಮಾನವೀಯತೆಯಿಂದ ಎಲ್ಲರೂ ಒಟ್ಟಾಗಿ ಬದುಕಬೇಕು. ಎಲ್ಲ ಧರ್ಮದವರಿಗೂ ದೇವಾಲಯಗಳಲ್ಲಿ ಅವಕಾಶ ನೀಡುತ್ತೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಗರ್ಭಕಂಠ ಕ್ಯಾನ್ಸರ್‌ ಜಾಗೃತಿಗಾಗಿ ತನ್ನದೇ ಸಾವಿನ ಸುದ್ದಿ ಹರಡಿದ ನಟಿ ಪೂನಂ ಪಾಂಡೆ!

ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಡೀ ಭಾರತ ಒಂದು. ಕಾಂಗ್ರೆಸ್ ಪಕ್ಷ ಭಾರತವನ್ನು ಸದಾ ಒಗ್ಗಟ್ಟಾಗಿ ಇಟ್ಟಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಸುರೇಶ್ ಅವರು ಕೂಡ ದೇಶವನ್ನು ಒಗ್ಗಟ್ಟಾಗಿ ಇಡಬೇಕು, ಸಮಾನತೆಯಿಂದ ದೇಶದ ಸಂಪತ್ತು ಹಂಚಬೇಕು ಎಂದು ಧ್ವನಿ ಎತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...