2024ರಲ್ಲಿ ಮೋದಿ ಗೆದ್ದರೆ ನರೇಂದ್ರ ಪುಟಿನ್‌ ಆಗುತ್ತಾರೆ; ಪಂಜಾಬ್‌ ಸಿಎಂ ಭಗವಂತ್ ಮಾನ್

Date:

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷರಂತೆ “ನರೇಂದ್ರ ಪುಟಿನ್” ಆಗುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆತಂಕ ವ್ಯಕ್ತಪಡಿಸಿದರು.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರಾಷ್ಟ್ರ ರಾಜಧಾನಿ ವಿರುದ್ಧ ಆಡಳಿತ ಸೇವಾ ವಿಷಯಗಳಲ್ಲಿ ಹೊರಡಿಸುತ್ತಿರುವ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಆಮ್ ಆದ್ಮಿ ಹಮ್ಮಿಕೊಂಡಿರುವ ಮಹಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮೋದಿ ಈಗಾಗಲೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪೂರ್ಣ ಪ್ರಮಾಣದ ಸರ್ವಾಧಿಕಾರಿಯಾಗಲಿದ್ದಾರೆ. 2024ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಚುನಾವಣೆಯೇ ಇರುವುದಿಲ್ಲ. 2024ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ನರೇಂದ್ರ ಮೋದಿ ನರೇಂದ್ರ ಪುಟಿನ್ ಆಗುತ್ತಾರೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶುಭಮನ್ ಗಿಲ್‌ ಔಟ್‌ ಬಗ್ಗೆ ವಿವಾದಾತ್ಮಕ ತೀರ್ಪು; ಕ್ರಿಕೆಟ್ ದಿಗ್ಗಜರಿಂದ ಅಂಪೈರ್‌ ಬಗ್ಗೆ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಮೋದಿಯನ್ನು ಭಾರತದ ‘ಮಾಲಿಕ್’ ಎಂದು ಪರಿಗಣಿಸಲು ಪ್ರಾರಂಭಿಸಿದ್ದಾರೆ. 140 ಕೋಟಿ ಭಾರತೀಯರಿರುವ ಭಾರತವನ್ನು ಒಟ್ಟಿಗೆ ಕೊಂಡೊಯ್ದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ. ಬಿಜೆಪಿ ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಬಿಜೆಪಿಯವರು ಹಿಂದೂ ರಾಷ್ಟ್ರವನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಇದು ದೇಶದಲ್ಲಿ ಅಂತರ್ಯುದ್ಧಕ್ಕೆ ಕಾರಣವಾಗುತ್ತದೆ” ಎಂದು ಭಗವಂತ್ ಮಾನ್ ತಿಳಿಸಿದರು.

ಮಹಾ ರ್‍ಯಾಲಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ದೆಹಲಿ ಎಎಪಿ ನಾಯಕ ಮತ್ತು ಸಚಿವ ಗೋಪಾಲ್ ರೈ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.

ಆಡಳಿತ ಸೇವಾ ವಿಷಯಗಳಲ್ಲಿ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಪ್ರತಿಭಟಿಸಲು ದೆಹಲಿಯ ಆಡಳಿತ ಪಕ್ಷವು ಈ ರ್‍ಯಾಲಿಯನ್ನು ಆಯೋಜಿಸಿದೆ. ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಕೋರಿರುವ ಎಎಪಿ, ಕೇಂದ್ರ ಸರ್ಕಾರವು ತನ್ನ ನಿಲುವನ್ನು ಮರುಪರಿಶೀಲಿಸಬೇಕು ಮತ್ತು ದೆಹಲಿಯ ಜನರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂದಿದೆ. ಸುಗ್ರೀವಾಜ್ಞೆಯಿಂದ ದೆಹಲಿ ಜನರ ದೈನಂದಿನ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಕೇಂದ್ರ ಸರ್ಕಾರಕ್ಕೆ ಎಎಪಿ ವಿವರಿಸಿದೆ.

ಜನರಿಂದ ಆಯ್ಕೆಯಾದ ದೆಹಲಿ ಸರ್ಕಾರದ ಆಡಳಿತದ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ಹೊರಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...