ಪಂಜಾಬ್ | 500 ಕೋಟಿ ರೂ. ನೀಡಿದವರು ಮುಖ್ಯಮಂತ್ರಿಯಾಗುತ್ತಾರೆ: ಪತ್ನಿ ನವಜೋತ್ ಕೌರ್

Date:

ಪಂಜಾಬ್‌ನಲ್ಲಿ ಕಾಂಗ್ರೆಸ್ ನವಜೋತ್ ಸಿಂಗ್ ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಅವರು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ. ಅದಕ್ಕಾಗಿ ನೀಡಲು 500 ಕೋಟಿ ರೂಪಾಯಿ ನಮ್ಮಲಿಲ್ಲ ಎಂದು ಸಿಧು ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.

ಶನಿವಾರ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಯಾವಾಗಲೂ ಪಂಜಾಬ್ ಮತ್ತು ಪಂಜಾಬಿಗಳ ಪರವಾಗಿ ಮಾತನಾಡುತ್ತೇವೆ. ಆದರೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಾವು ನೀಡಬೇಕಾದ 500 ಕೋಟಿ ರೂ. ನಮ್ಮ ಬಳಿ ಇಲ್ಲ. ಆದರೆ ನಾವು ಪಂಜಾಬ್ ಅನ್ನು ‘ಸುವರ್ಣ ರಾಜ್ಯ’ವನ್ನಾಗಿ ಪರಿವರ್ತಿಸಬಹುದು” ಎಂದರು.

ಇದನ್ನು ಓದಿದ್ದೀರಾ? ‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಯಾರಾದರೂ ಅವರ ಬಳಿ ಹಣ ಕೇಳಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರತಿಕ್ರಿಯಿಸಿದ ಕೌರ್, “500 ಕೋಟಿ ರೂ. ಸೂಟ್‌ಕೇಸ್ ನೀಡುವವನು ಮುಖ್ಯಮಂತ್ರಿಯಾಗುತ್ತಾನೆ. ಯಾವುದೇ ಪಕ್ಷ ಸಿಧು ಅವರಿಗೆ ಈ ಅವಕಾಶ ನೀಡಿದರೆ ನಾವು ಪಂಜಾಬ್ ಅನ್ನು ಸುಧಾರಿಸಬಹುದು. ಯಾವುದೇ ಪಕ್ಷಕ್ಕೆ ನೀಡಲು ನಮ್ಮಲ್ಲಿ ಹಣವಿಲ್ಲ. ಆದರೆ ನಾವು ಉತ್ತಮ ಕೆಲಸ ಮಾಡುತ್ತೇವೆ. ಪಂಜಾಬ್ ಅನ್ನು ಸುವರ್ಣ ರಾಜ್ಯವನ್ನಾಗಿ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಸಿಧು ಸಿಎಂ ಆಗುವ ಅವಕಾಶವನ್ನು ಬಿಜೆಪಿ ನೀಡಬಹುದೇ? ನೀಡಿದರೆ ಸಿಧು ಬಿಜೆಪಿಗೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಕೌರ್, “ನಾನು ಸಿಧು ಅವರ ಪರವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಪಂಜಾಬ್ ಕಾಂಗ್ರೆಸ್ ಘಟಕದೊಳಗಿನ ಒಳಜಗಳದ ಬಗ್ಗೆಯೂ ಈ ವೇಳೆ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಐವರು ಆಕಾಂಕ್ಷಿಗಳಾಗಿದ್ದು, ಅವರೆಲ್ಲರೂ ಸಿಧು ಮುಂದೆ ಬರಲು ಬಿಡುವುದಿಲ್ಲ ಎಂದು ದೂರಿದರು. ಇನ್ನು ಪ್ರಶ್ನೆಯೊಂದಿಗೆ ಪ್ರತಿಕ್ರಿಯಿಸುತ್ತಾ ತಮ್ಮ ಪತಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದೂ ಹೇಳಿದರು.

ಇದನ್ನು ಓದಿದ್ದೀರಾ? ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸಿಧು ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲೂ ಅವರು ಪ್ರಚಾರ ಮಾಡಲಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಸೀಸನ್‌ನಲ್ಲಿ ಸಿಧು ಮತ್ತೆ ಕ್ರಿಕೆಟ್ ಕಾಮೆಂಟರಿಯಾಗಿದ್ದರು.

ಹಾಗೆಯೇ ಏಪ್ರಿಲ್‌ನಲ್ಲಿ, ಸಿಧು ತಮ್ಮ ಜೀವನ ಅನುಭವಗಳನ್ನು ಹಂಚಿಕೊಳ್ಳಲು, ಕ್ರಿಕೆಟ್, ಜೀವನಶೈಲಿಯ ಬಗ್ಗೆ ಮಾತನಾಡಲು ತಮ್ಮ ಹೊಸ ಯೂಟ್ಯೂಬ್ ಚಾನೆಲ್ ‘ನವಜೋತ್ ಸಿಧು ಅಧಿಕೃತ’ವನ್ನು ಪ್ರಾರಂಭಿಸಿದ್ದರು. ಆ ಸಮಯದಲ್ಲಿ, ಸಿಧು ಅವರನ್ನು ಸಕ್ರಿಯ ರಾಜಕೀಯಕ್ಕೆ ಮರಳುವ ಬಗ್ಗೆ ಕೇಳಿದಾಗ, ಜನರ ಕಲ್ಯಾಣಕ್ಕಾಗಿ ರಾಜಕೀಯ ಮಾಡಿದ್ದು ಅದು ಎಂದಿಗೂ ವ್ಯವಹಾರವಲ್ಲ ಎಂದಿದ್ದರು. ಇನ್ನು 2027ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...