ದೇಶದಲ್ಲಿ ಕಾಂಗ್ರೆಸ್‌ 20 ಸ್ಥಾನ ಗೆದ್ದರೆ ಅದೇ ಹೆಚ್ಚು: ಸಿ ಟಿ ರವಿ ಲೇವಡಿ

Date:

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈ ಸಲ ಅದು ಕೂಡ ಗೆಲ್ಲೋದಿಲ್ಲ. ದೇಶದಲ್ಲಿ 20 ಸ್ಥಾನ ಗೆದ್ದರೆ ಅದೇ ಹೆಚ್ಚು ಎಂದು ಸಿ ಟಿ ರವಿ ಹೇಳಿದರು.

ಬಳ್ಳಾರಿ ನಗರದ ಬಸವ ಭವನದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಬಿಜೆಪಿ ದೇಶಾದ್ಯಂತ 400 ಸ್ಥಾನ ಗೆದ್ದೇ ಗೆಲ್ಲುತ್ತದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ” ಎಂದರು.

“ಇಂಡಿಯಾ ಒಕ್ಕೂಟ ಆರಂಭದಲ್ಲಿ ಒಂದೆರಡು ಮೀಟಿಂಗ್‌ನಲ್ಲಿ ದೊಡ್ಡ ಸದ್ದು ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಆಯ್ತು. ದೇಶದಲ್ಲಿ ರಾಮಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಕೂಡ ಜೈಶ್ರೀರಾಂ ಅನ್ನೋ ಹಾಗೇ ಆಯ್ತು. ನಲವತ್ತು ವರ್ಷದ ರಾಜಕಾರಣದಲ್ಲಿ ರಾಮಮಂದಿರ ಕಟ್ಟಬೇಕೆಂದು ಒಮ್ಮೆಯೂ ಹೇಳಿಲ್ಲ. ಸಿದ್ದರಾಮಯ್ಯ ಬಾಯಿಯಲ್ಲಿ ಜೈಶ್ರೀರಾಮ್ ಬಂದಿದೆ ಅಂದರೆ, ಕಾಂಗ್ರೆಸ್ ನವರಿಗೆ ಗೊತ್ತಾಗಿದೆ ಬಿಜೆಪಿ ಗೆಲ್ಲುತ್ತದೆ ಎಂದು” ಎಂದರು.

ಧ್ವಜ ವಿಚಾರವಾಗಿ ಮಾತನಾಡಿ, “ಮಂಡ್ಯ ವಿಚಾರದಲ್ಲಿ ಮಹಾ ಅಪರಾಧವಾಗಿದೆ. ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ. ರಾಷ್ಟ್ರಧ್ವಜ ಹಾರಿಸಲು ಬೇಡ ಅಂದವರಾರು? ಹನುಮ ಧ್ವಜ ಇಳಿಸಿ ಹಾರಿಸಬೇಕಿತ್ತೇ? ಅದಕ್ಕಿಂತ ದೊಡ್ಡ ಸ್ತಂಬದ ಮೇಲೆ ಎತ್ತರದ ರಾಷ್ಟ್ರ ಧ್ವಜ ಹಾರಿಸಿ. ಹನುಮ ಧ್ವಜ ಮತ್ತು ರಾಷ್ಟ್ರ ಧ್ವಜ ಜಗಳ ಹಚ್ಚಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

“ಮೋದಿ ಮುಂದೆ ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ರಾಜಕೀಯ ನಡೆಯೋದಿಲ್ಲ. ಹಾಲಿಂದ ಆಲ್ಕೋಹಾಲಿನ ದರ ಏರಿಕೆ ಮಾಡಿದ್ದಾರೆ. ಲಕ್ಷಣ ಸವದಿ ಸೇರಿದಂತೆ ದೇಶ ಮುಖ್ಯ ಎನ್ನುವವರು ಬಿಜೆಪಿಗೆ ಬರಬೇಕು. ಅಧಿಕಾರ ಆಸ್ತಿ ಅಲ್ಲದೇ ದೇಶ ಮುಖ್ಯ ಎನ್ನುವವರಿಗೆ ಬಿಜೆಪಿ ಬಾಗಿಲು ತೆರೆದಿದೆ” ಎಂದರು.

ಕುರುಬರು ಹಿಂದೂಗಳಲ್ಲವೇ?

“ಕುರುಬರ ಹಾಸ್ಟೆಲ್ ಮೇಲೆ ಯಾರು ದಾಳಿ ಮಾಡಿಲ್ಲ. ಹಾಸ್ಟೆಲ್ ಮುಂದೆ ಇರೋ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದಿದ್ದಾರೆ. ಕಾಂಗ್ರೆಸ್ ಟೂಲ್ ಕಿಟ್ ರಾಜಕೀಯ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಕುರುಬರು ಹಿಂದೂಗಳಲ್ಲವೆ? ಅವರು ದೇಶ ಭಕ್ತರು. ಸಂಗೊಳ್ಳಿ ರಾಯಣ್ಣ ಯಾರು? ಕನಕದಾಸ ಸನಾತನ ಪರಂಪರೆ ಎತ್ತಿ ಹಿಡಿದಿದ್ದಾರೆ” ಎಂದು ತಿಳಿಸಿದರು.

ಮಾಗಡಿ ಶಾಸಕ ಬಾಲಕೃಷ್ಣ ವಿಚಾರವಾಗಿ ಮಾತನಾಡಿ, “2024 ರ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಅನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸದಿದ್ದರೆ ತಮ್ಮ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳನ್ನು ಹಿಂಪಡೆಯಲಿದೆ ಎಂದು ಕಾಂಗ್ರೆಸ್ ಶಾಸಕ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸುಳ್ಳುಗಾರ ಕಾಂಗ್ರೆಸ್‌ಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...