ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮವಾಗಲಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Date:

ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ” ಎಂದು ಆರೋಪವನ್ನು ತಳ್ಳಿ ಹಾಕಿದರು.

“ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ” ಎಂದು ದಾಖಲೆ ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ” ಎಂದರು.

“ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ” ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

“ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ. ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ” ಎಂದು ಕಿಡಿಕಾರಿದರು.

“ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...