ನೋವಾಗಿದ್ದರೆ ಮರೆತು ಬಿಡಿ – ಪಕ್ಷದೊಂದಿಗೆ ಕೈ ಜೋಡಿಸಿ; ಈಶ್ವರಪ್ಪಗೆ ವಿಜಯೇಂದ್ರ ಮನವಿ

Date:

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು, ಪಕ್ಷಕ್ಕೆ ಸಹಕಾರ ನೀಡಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ನಾನು ಈಶ್ವರಪ್ಪ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗಿಲ್ಲ. ಅವರ ಜೊತೆ ಶೀಘ್ರದಲ್ಲೇ ಮಾತನಾಡುತ್ತೇನೆ. ಅವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ” ಎಂದು ಈಶ್ವರಪ್ಪಗೆ ಮನವಿ ಮಾಡಿದ್ದಾರೆ.

“ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು. ಅದಕ್ಕಾಗಿ, ರಾಘವೇಂದ್ರ ಅವರಿಗೆ ಈಶ್ವರಪ್ಪ ಬೆಂಬಲ ನೀಡಿ ಗೆಲ್ಲಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮಗನಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಈಶ್ವರಪ್ಪ ಕೇಳಿದ್ದರು. ಆದರೆ, ಟಿಕೆಟ್‌ ನೀಡಲಾಗಿಲ್ಲ. ತಮ್ಮ ಮಗನಿಗೆ ಟಿಕೆಟ್‌ ದೊರೆಯದೇ ಇರುವುದನ್ನು ಯಡಿಯೂರಪ್ಪ ಕಾರಣ ಎಂದು ಆರೋಪಿಸಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ತಾವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ, ದೆಹಲಿಗೆ ಬರುವಂತೆ ಈಶ್ವರಪ್ಪಗೆ ಅಮಿತ್ ಶಾ ಬುಲಾವ್ ನೀಡಿದ್ದರು. ಅದರೆ, ಈಶ್ವರಪ್ಪ ದೆಹಲಿಗೆ ಹೋದರೂ, ಅಮಿತ್ ಶಾ ಭೇಟಿ ಮಾಡಲಾಗಿಲ್ಲ. ಹೀಗಾಗಿ, ತಮ್ಮ ನಿರ್ಧಾರವನ್ನು ಈಶ್ವರಪ್ಪ ಮತ್ತಷ್ಟು ಗಟ್ಟಿಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...