ಹಣೆಯಲ್ಲಿ ಬರೆದಿದ್ದರೆ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ: ಡಿ ಕೆ ಸುರೇಶ್

Date:

ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು? ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮದವರು, ‘ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ’ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ” ಎಂದರು.

“ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು”ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2028ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ

“2028ರ ಚುನಾವಣೆಗೂ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ಕೇಳಿದಾಗ, “ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ.‌ ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಒಬ್ಬ ನಾಯಕನಿಗೆ ಇರಬೇಕಾದ ಎಲ್ಲ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ” ಎಂದರು.

ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಎನ್ನುವ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ‌ ಮಾಡುತ್ತಿವೆ” ಎಂದು ಹೇಳಿದರು.

ಮೈಗೆ ಎಣ್ಣೆ ಸವರಿಕೊಂಡು ಉತ್ತರ ನೀಡಲು ಕುಳಿತಿದ್ದೀರಾ ಎಂದಾಗ, “ನಾನು ಎಂದಿಗೂ ಮೈಗೆ ಎಣ್ಣೆ ಹಚ್ಚಿಕೊಳ್ಳುವವನಲ್ಲ. ಒಳಗೆ ಹಾಕಿಕೊಳ್ಳುವವನಲ್ಲ. ನನಗೆ ಎರಡೂ ಅಭ್ಯಾಸ ಇಲ್ಲ” ಎಂದರು.

ಆರ್‌ಎಸ್‌ಎಸ್‌ ತನ್ನ ಕೆಲವು ಬದಲಾವಣೆ ಮಾಡಿಕೊಳ್ಳಬೇಕು

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ವಿಚಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಬಗ್ಗೆ ಕೇಳಿದಾಗ, “ಆರ್‌ ಎಸ್ ಎಸ್ ಪಥಸಂಚಲ‌ನಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ದೊಣ್ಣೆ ಹಿಡಿದುಕೊಂಡು ಮಾಡುವ ಪಥ ಸಂಚಲನಕ್ಕೆ ವಿರೋಧವಿದೆ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನ ಹಿಂದಿನ ಕಾಲದಲ್ಲಿ ಸರಿ ಎನಿಸುತ್ತಿತ್ತು. ಬೇರೆಯವರು ಇದೇ ಸಂದರ್ಭದಲ್ಲಿ ಲಾಠಿ ಹಿಡಿದು ಓಡಾಡುವುದಕ್ಕೆ ಅವಕಾಶ ನೀಡುತ್ತೀರಾ ಎನ್ನುವುದು ಇಲ್ಲಿನ ಪ್ರಶ್ನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...