ಮಹದಾಯಿ, ಭದ್ರಾ ವಿಚಾರಕ್ಕೆ ಒಪ್ಪಿಗೆ ಕೊಡಿಸಿದರೆ, ಜೋಶಿ ಅವರಿಗೆ ದೀರ್ಘ ದಂಡ ನಮಸ್ಕಾರ ಹಾಕುವೆ: ಡಿ ಕೆ ಶಿವಕುಮಾರ್

Date:

“ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲ ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ..”

ಹೀಗೆ ಹೇಳಿದವರು ಡಿಸಿಎಂ ಡಿ ಕೆ ಶಿವಕುಮಾರ್. ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು, “ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ ಎಂದು ಇಲ್ಲಿಂದಲೇ ಪ್ರಲ್ಹಾದ್‌ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದರು.

‘ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ’ ಎನ್ನುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ ಸ್ವರೂಪದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ

ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ ಅವರ ಹೇಳಿಕೆಯ ಬಗ್ಗೆ ಮಾತನಾಡಿ, “ಸಂಸದ ಡಾ. ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ. ಇದು ನನ್ನ ಜವಾಬ್ದಾರಿ” ಎಂದರು.

“ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಬೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ” ಎಂದು ಹೇಳಿದರು.

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ, “ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಮೊನ್ನೆ ನಡೆದ ಸಚಿವ ಸಂಪುಟ ಸಭೆಗೆ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ” ಎಂದರು.

ಬಯಲು ಸೀಮೆಯಲ್ಲಿ ಇನ್ನು ಕೆರೆಗಳು ತುಂಬಿಲ್ಲ

“ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...